ಭಾನುವಾರ, ಸೆಪ್ಟೆಂಬರ್ 25, 2022
29 °C

ಮಿಸ್ತ್ರಿ ಸ್ನೇಹಿತ ಡೇರಿಯಸ್‌ ಪಾಂಡೋಲೆಗೆ ಶಸ್ತ್ರಚಿಕಿತ್ಸೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಟಾಟಾ ಸನ್ಸ್‌ ಸಂಸ್ಥೆಯ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ತ್ರಿ ಅವರ ಸಹ ಪ್ರಯಾಣಿಕ ಡೇರಿಯಸ್‌ ಪಾಂಡೋಲೆ ಗುರುವಾರ ಮುಂದೋಳು ಶಸ್ತ್ರಚಿಕಿತ್ಸೆಗೆ ಒಳಗಾದರು ಎಂದು ಅವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡೇರಿಯಸ್‌ ಅವರ ಪತ್ನಿ ಅನಾಹಿತಾ ಪಾಂಡೋಲೆ ಅವರ ಸ್ಥಿತಿ ಸ್ಥಿರವಾಗಿದೆ, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ನಿಗಾದಲ್ಲಿ ಇರಿಸಲಾಗಿದೆ ಎಂದು ಹೇಳಲಾಗಿದೆ. 

ಕಳೆದ ಭಾನುವಾರ ಮಹಾರಾಷ್ಟ್ರದ ಪಾಲ್ಗಾರ್‌ನಲ್ಲಿ ನಡೆದಿದ್ದ ಕಾರು ಅಪಘಾತದಲ್ಲಿ ಸೈರಸ್‌ ಮಿಸ್ತ್ರಿ ಮತ್ತು ಅವರ ಸ್ನೇಹಿತರಾದ ಜಹಾಂಗೀರ್‌ ಪಾಂಡೋಲೆ ಅವರು ಮೃತಪಟ್ಟರು. ಅನಾಹಿತ ಮತ್ತು ಡೇರಿಯಸ್‌ ಅವರು ಗಾಯಗೊಂಡಿದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು