ಭಾನುವಾರ, ಜುಲೈ 25, 2021
26 °C

ಪ್ರಚೋದನಕಾರಿ ಭಾಷಣ; ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿಚಾರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಪ್ರೇರಣೆ ನೀಡುವ ಪ್ರಚೋದನಕಾರಿ ಭಾಷಣದ ಆರೋಪಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ, ಬಿಜೆಪಿಯ ನಾಯಕ ಮಿಥುನ್ ಚಕ್ರವರ್ತಿ ಅವರನ್ನು ಬುಧವಾರ ಕೋಲ್ಕತ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಬುಧವಾರ ಬೆಳಗ್ಗೆ 10.30ಕ್ಕೆ ಆರಂಭವಾದ ವರ್ಚುವಲ್ ವಿಚಾರಣೆಯು 45 ನಿಮಿಷಗಳ ಕಾಲ ಮುಂದುವರಿಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮಿಥುನ್ ಅವರು ಪುಣೆಯಲ್ಲಿರುವ ಕಾರಣ ವರ್ಚುವಲ್ ಆಗಿ ವಿಚಾರಣೆ ನಡೆಸಲಾಯಿತು. ಅಲ್ಲದೆ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಅನೇಕ ಪ್ರಶ್ನೆಗಳನ್ನು ಕೇಳಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಬುಧವಾರದಂದು 71ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಈ ಮೂಲಕ ಹುಟ್ಟುಹಬ್ಬದಂದೇ ಪೊಲೀಸ್ ವಿಚಾರಣೆಗೆ ಒಳಪಟ್ಟಿದ್ದಾರೆ.

ವಿಚಾರಣೆಯು 45 ನಿಮಿಷಗಳ ಕಾಲ ನಡೆಯಿತು. ಚಕ್ರವರ್ತಿ ಅವರನ್ನು ಅಧಿಕಾರಿಗಳು ಕನಿಷ್ಠ 12 ಪ್ರಶ್ನೆಗಳನ್ನು ಕೇಳಿದರು. ವಿಧಾನಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಅವರು ಪ್ರಚೋದನಕಾರಿ ಭಾಷಣ ಮಾಡಲು ಬಿಜೆಪಿ ಪಕ್ಷವು ಸೂಚನೆ ನೀಡಿತ್ತೇ ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಕೇಳಲಾಗಿದೆ.

ಮಾರ್ಚ್ 7ರಂದು ಬಿಜೆಪಿ ಸೇರ್ಪಡೆಗೊಂಡಿರುವ ಮಿಥುನ್, ನೀಡಿರುವ ಗಲಭೆ ಪ್ರೇರಿತ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಎಲ್ಲ ಭಾಷಣಗಳು ಚುನಾವಣೋತ್ತರ ಹಿಂಸಾಚಾರಕ್ಕೆ ಪ್ರೇರಣೆ ನೀಡಿವೆ ಎಂದು ಆರೋಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು