ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಟ್ಯಾಂಕರ್ ಸ್ಫೋಟ: ನಾಲ್ಕು ಮಂದಿ ಸಾವು

ಮಿಜೋರಾಂನ ಐಜಾಲ್‌ನಲ್ಲಿ ಅವಘಡ | 18 ಮಂದಿಗೆ ಗಾಯ
Last Updated 30 ಅಕ್ಟೋಬರ್ 2022, 6:32 IST
ಅಕ್ಷರ ಗಾತ್ರ

ಐಜಾಲ್: ಮಿಜೋರಾಂನ ಐಜಾಲ್‌ನಲ್ಲಿ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಅಪಘಾತಕ್ಕೀಡಾಗಿ ಸ್ಫೋಟಗೊಂಡ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ಟ್ಯಾಂಕರ್ ಸ್ಫೋಟ ಪ್ರಕರಣದಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

22,000 ಲೀಟರ್ ಪೆಟ್ರೋಲ್ ಅನ್ನು ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತಕ್ಕೀಡಾಗಿದೆ. ನಂತರ ಬೆಂಕಿ ಹೊತ್ತಿಕೊಂಡಿದ್ದರಿಂದ ಅವಘಡ ಸಂಭವಿಸಿತು ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತಕ್ಕೀಡಾಗಿದ್ದ ಟ್ಯಾಂಕರ್‌ನಿಂದ ಪೆಟ್ರೋಲ್ ಸೋರಿಕೆಯಾಗಿತ್ತು. ಆ ಸಂದರ್ಭದಲ್ಲಿ ಸ್ಥಳೀಯರು ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದರು. ಆಗ ಬೆಂಕಿ ಹೊತ್ತಿಕೊಂಡಿದ್ದರಿಂದ ಸ್ಥಳದಲ್ಲಿದ್ದ ನಾಲ್ವರು ಸುಟ್ಟು ಹೋದರೆ, ಮತ್ತೆ 18 ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT