ಮಿಜೋರಾಂ: ಅಡಿಕೆ ಕಳ್ಳ ಸಾಗಣೆ ಶಂಕೆ, ಆರು ವಾಹನಗಳಿಗೆ ಬೆಂಕಿ

ಐಜ್ವಾಲ್, ಮಿಜೋರಾಂ: ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಆರೋಪದ ಮೇಲೆ, ರಾಜ್ಯದ ಮಮಿತ್ ಜಿಲ್ಲೆಯಲ್ಲಿ ಗುಂಪೊಂದು ಕನಿಷ್ಠ ಆರು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ.
‘ಝಮುವಾಂಗ್ ಮತ್ತು ಝಾಲ್‌ನುವಾಮ್ ಎಂಬ ಗ್ರಾಮಗಳ ಬಳಿ, ರಾಷ್ಟ್ರೀಯ ಹೆದ್ದಾರಿ 108ರಲ್ಲಿ ಶನಿವಾರ ಈ ಘಟನೆ ನಡೆದಿದೆ. 50 ಜನರಿದ್ದ ಗುಂಪು, ವಾಹನಗಳನ್ನು ತಡೆದು ಬೆಂಕಿ ಹಚ್ಚಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಾಲ್‌ತಾಂಗ್‌ಪುಯಿ ಪುಲಮ್ಟೆ ಹೇಳಿದ್ದಾರೆ.
‘ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಯಾರೂ ಈ ಘಟನೆಯ ಹೊಣೆ ಹೊತ್ತುಕೊಂಡಿಲ್ಲ ಹಾಗೂ ಈ ವರೆಗೆ ಯಾರನ್ನೂ ಬಂಧಿಸಲಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.
ಮ್ಯಾನ್ಮಾರ್‌ನಿಂದ ಅಡಿಕೆಯನ್ನು ಕಳ್ಳ ಸಾಗಣೆ ಮಾಡಲಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಮಮಿತ್ ಜಿಲ್ಲೆಯ ಅಡಿಕೆ ಬೆಳೆಗಾರರ ಸಂಘ ಕಳೆದ ತಿಂಗಳು ಒತ್ತಾಯಿಸಿತ್ತು. ಕಳ್ಳಸಾಗಣೆ ತಡೆಯದಿದ್ದರೆ ಮುಂದಾಗುವ ಯಾವುದೇ ಅಹಿತಕರ ಘಟನೆಗೆ ತಾನು ಹೊಣೆಯಲ್ಲ ಎಂದೂ ಸಂಘ ಎಚ್ಚರಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.