ಶುಕ್ರವಾರ, ಸೆಪ್ಟೆಂಬರ್ 25, 2020
22 °C
ಸ್ವಾತಂತ್ರ್ಯ ದಿನಾಚರಣೆ ಕಾರಣ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು

ಕಾಶ್ಮೀರ ಕಣಿವೆಯಲ್ಲಿ ಇಂಟರ್‌ನೆಟ್‌ ಸೇವೆ ಪುನಾರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಶನಿವಾರ ಇಲ್ಲಿ ನಡೆದ ಕಾರ್ಯಕ್ರಮಗಳು ಮುಗಿದ ನಂತರ ಇಂಟರ್‌ನೆಟ್‌ ಸೇವೆಯನ್ನು ಪುನಃ ಆರಂಭಿಸಲಾಯಿತು.

ಶೇರ್‌–ಎ–ಕಾಶ್ಮೀರ್ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೆಳಿಗ್ಗೆಯಿಂದ ಕೆಲ ಗಂಟೆಗಳ ಕಾಲ ಕಾಶ್ಮೀರ ಕಣಿವೆಯಲ್ಲಿ ಮೊಬೈಲ್‌ಗೆ ಒದಗಿಸುತ್ತಿದ್ದ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. 

2005ರಲ್ಲಿ ಇಲ್ಲಿನ ಬಕ್ಷಿ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಪಥಸಂಚಲನ ನಡೆಯುತ್ತಿತ್ತು. ಆಗ ಉಗ್ರರು ಮೊಬೈಲ್‌ ಬಳಸಿ ಸ್ಟೇಡಿಯಂ ಹೊರಗೆ ಬಾಂಬ್‌ ಸ್ಫೋಟಿಸಿದ್ದರು. ಈ ಘಟನೆ ನಂತರ ಭದ್ರತೆ ಕಾರಣದಿಂದಾಗಿ ಆ ವರ್ಷದಿಂದಲೂ ದಿನಾಚರಣೆ ಸಂದರ್ಭದಲ್ಲಿ ಮೊಬೈಲ್‌ ಹಾಗೂ ಇಂಟರ್‌ನೆಟ್‌ ಸೇವೆಯನ್ನು ಕೆಲ ಕಾಲ ಸ್ಥಗಿತಗೊಳಿಸಲಾಗುತ್ತಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು