ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನ್ನೆಚ್ಚರಿಕಾ ಕ್ರಮ: ಜಮ್ಮು–ಕಾಶ್ಮೀರದಲ್ಲಿ ಇಂಟರ್‌ನೆಟ್‌ ಸೇವೆ ಸ್ಥಗಿತ

Last Updated 26 ಜನವರಿ 2021, 4:59 IST
ಅಕ್ಷರ ಗಾತ್ರ

ಶ್ರೀನಗರ: ಉಗ್ರರು ಯಾವುದೇ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಾಧ್ಯವಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು–ಕಾಶ್ಮೀರದಲ್ಲಿ ಮೊಬೈಲ್‌ ಇಂಟರ್‌ನೆಟ್‌ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ದೆಹಲಿಯಲ್ಲಿ ಗಣರಾಜ್ಯೋತ್ಸವ ಸಮಾರಂಭ ಮತ್ತು ರೈತರಿಂದ ಬೃಹತ್‌ ಟ್ರ್ಯಾಕ್ಟರ್‌ ರ್‍ಯಾಲಿ ನಡೆಯಲಿದ್ದು, ದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಭದ್ರತಾ ದೃಷ್ಟಿಯಿಂದ ಮಂಗಳವಾರ ಬೆಳಿಗ್ಗೆಯಿಂದಲ್ಲೇ ಮೊಬೈಲ್‌ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಹಿನ್ನೆಲೆ ಸ್ಥಳೀಯ ಮಟ್ಟದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಚರಣೆ ಮುಗಿದ ಕೂಡಲೇ ಇಂಟರ್‌ನೆಟ್‌ ಸೇವೆಯನ್ನು ಆರಂಭಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT