ಭಾನುವಾರ, ನವೆಂಬರ್ 29, 2020
21 °C
ಸಮುದ್ರ ತೀರದಲ್ಲಿ ನಗ್ನವಾಗಿ ಓಡಿದ ಚಿತ್ರವನ್ನು ಅಪ್‌ಲೋಡ್‌ ಮಾಡಿದ್ದ ಮಿಲಿಂದ್‌

ಮಾಡೆಲ್‌ ಮಿಲಿಂದ್‌ ಸೋಮನ್‌ ವಿರುದ್ಧ ಪ್ರಕರಣ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ: ಸಮುದ್ರ ತೀರದಲ್ಲಿ ನಗ್ನವಾಗಿ ಓಡಿ ಆ ಚಿತ್ರವನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದ ಮಾಡೆಲ್‌ ಮಿಲಿಂದ್‌ ಸೋಮನ್‌ ವಿರುದ್ಧ ಗೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ವರ್ತಿಸಿದ್ದಾರೆ. ಇದರಿಂದ ಗೋವಾಗೂ ಕೆಟ್ಟ ಹೆಸರು ಬಂದಿದೆ ಎಂದು ಆರೋಪಿಸಿ ರಾಜಕೀಯ ಸಂಘಟನೆಯಾದ ಗೋವಾ ಸುರಕ್ಷಾ ಮಂಚ್‌(ಜಿಎಸ್‌ಎಂ) ದೂರು ನೀಡಿದ ಬಳಿಕ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ತಮ್ಮ 55ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರವನ್ನು ಮಿಲಿಂದ್‌ ಅಪ್‌ಲೋಡ್‌ ಮಾಡಿದ್ದರು. ಚಿತ್ರವನ್ನು ತೆಗೆದಿದ್ದು ತಮ್ಮ ಪತ್ನಿ ಅಂಕಿತಾ ಕೋನ್ವರ್‌ ಎಂದು ಚಿತ್ರದ ಅಡಿಬರಹದಲ್ಲಿ ಅವರು ಬರೆದಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು