ಮೋದಿ–ಅದಾನಿ ಭಾಯಿ–ಭಾಯಿ: ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಘೋಷಣೆ

ನವದೆಹಲಿ: ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡುತ್ತಿದ್ದಾಗ ‘ಮೋದಿ–ಅದಾನಿ ಭಾಯಿ–ಭಾಯಿ’ ಎಂಬ ಘೋಷಣೆ ಕೇಳಿ ಬಂದಿದೆ.
ಪ್ರಧಾನಿ ಮೋದಿ ಮಾತು ಆರಂಭಿಸುತ್ತಿದ್ದಂತೆ ಘೋಷಣೆ ಕೂಗಲು ಆರಂಭಿಸಿದ ವಿರೋಧ ಪಕ್ಷಗಳ ಸದಸ್ಯರು, ಸದನದ ಬಾವಿಯತ್ತ ಧಾವಿಸಿದರು.
ಇದೇವೇಳೆ, ಅದಾನಿ ವಿರುದ್ಧ ಹಿಂಡೆನ್‌ಬರ್ಗ್ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿರುವ ವಂಚನೆ ಮತ್ತು ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳ ಸದಸ್ಯರು, ‘ವಿ ವಾಂಟ್ ಜೆಪಿಸಿ’ಎಂದು ಘೋಷಣೆ ಕೂಗಿದರು.
ಪ್ರತಿಪಕ್ಷಗಳ ಸದಸ್ಯರ ಘೋಷಣೆಗೆ ಪ್ರತಿಕ್ರಿಯಿಸಿದ ಮೋದಿ, ನೀವು ಕೆಸರನ್ನು ಎರಚಿದಷ್ಟೂ ಕಮಲ ಅರಳುತ್ತದೆ ಎಂದು ಹೇಳಿದರು.
ಇವನ್ನೂ ಓದಿ..
ಅದಾನಿ ಅಕ್ರಮ ತನಿಖೆಗೆ ಕೋರಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.