ಶನಿವಾರ, ನವೆಂಬರ್ 28, 2020
25 °C

ಅನುಕೂಲಕರ ಸಮಯದಲ್ಲಿ ಪ್ರಧಾನಿ ಮೋದಿ, ಬೈಡನ್ ಮಾತುಕತೆ: ವಿದೇಶಾಂಗ ಸಚಿವಾಲಯ

ಪಿಟಿಐ Updated:

ಅಕ್ಷರ ಗಾತ್ರ : | |

Narendra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೊ ಬೈಡನ್ ಅವರು ಇಬ್ಬರಿಗೂ ಹೊಂದಾಣಿಕೆಯಾಗುವ ಸಮಯ ನೋಡಿಕೊಂಡು ಮಾತುಕತೆ ನಡೆಸಲಿದ್ದಾರೆ. ಭಾರತ– ಅಮೆರಿಕ ಬಾಂಧವ್ಯಕ್ಕೆ ಅಮೆರಿಕದಲ್ಲಿ ಉಭಯಪಕ್ಷೀಯ ಬೆಂಬಲ ಇದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ

ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.

ಪ್ರಧಾನಿಯವರು ಬೈಡನ್ ಅವರನ್ನು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಜತೆಗೆ, ಭಾರತ–ಅಮೆರಿಕ ಬಾಂಧವ್ಯ ವೃದ್ಧಿಗೆ ಅವರ ಕೊಡುಗೆ ಬಗ್ಗೆ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ ಶ್ರೀವಾಸ್ತವ ಹೇಳಿದ್ದಾರೆ.

ಉಭಯ ದೇಶಗಳ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವುದಕ್ಕಾಗಿ ಜತೆಯಾಗಿ ಕೆಲಸ ಮಾಡುವುದನ್ನು ಎದುರು ನೋಡುತ್ತಿರುವುದಾಗಿಯೂ ಮೋದಿ ತಮ್ಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ ಎಂದೂ ಶ್ರೀವಾಸ್ತವ ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು