ಶುಕ್ರವಾರ, ಸೆಪ್ಟೆಂಬರ್ 25, 2020
28 °C

ಕನಿಷ್ಠ ಸರ್ಕಾರ, ಗರಿಷ್ಠ ಖಾಸಗೀಕರಣ : ರಾಹುಲ್‌ ಟೀಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನೇಮಕಾತಿ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು, ‘ಮೋದಿ ಅವರದ್ದು ಕನಿಷ್ಠ ಸರ್ಕಾರ, ಗರಿಷ್ಠ ಖಾಸಗೀಕರಣದ ಚಿಂತನೆಯಾಗಿದೆ’ ಎಂದು ಟೀಕಿಸಿದ್ದಾರೆ.

ಕೊವಿಡ್‌–19 ನೆಪ ಹೇಳಿಕೊಂಡು ಸರ್ಕಾರಿ ಕಚೇರಿಗಳನ್ನು ಕಾಯಂ ಸಿಬ್ಬಂದಿಯಿಂದ ‘ಮುಕ್ತ’ಗೊಳಿಸುವ ಉದ್ದೇಶ ಇದ್ದಂತಿದೆ ಎಂದು ಅವರು ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಪತ್ರಿಕೆಯೊಂದರ ವರದಿಯನ್ನು ಅವರು ಟ್ಯಾಗ್‌ ಮಾಡಿದ್ದಾರೆ.

‘ಯುವಕರ ಭವಿಷ್ಯವನ್ನು ಕಸಿದುಕೊಳ್ಳುವುದರ ಜತೆಗೆ ತನ್ನ ಸ್ನೇಹಿತರನ್ನು ಉತ್ತೇಜಿಸುವುದು ಇದರ ಹಿಂದಿನ ಉದ್ದೇಶವಾಗಿದೆ’ ಎಂದು ಅವರು ಪ್ರಧಾನಿಯನ್ನು ಗುರಿಯಾಗಿಸಿ ಟ್ವೀಟ್‌ ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರು ಧ್ವನಿಯೆತ್ತಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು