ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರ ‘ಉದ್ಯೋಗಕ್ಕೆ ಮಾರಕ': ರಾಹುಲ್ ಆರೋಪ

Last Updated 3 ಸೆಪ್ಟೆಂಬರ್ 2021, 7:01 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಆಗಸ್ಟ್‌ ತಿಂಗಳಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿರುವ ಕುರಿತ ವರದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ನರೇಂದ್ರ ಮೋದಿ ಸರ್ಕಾರ ಉದ್ಯೋಗಕ್ಕೆ ಮಾರಕವಾಗಿದೆ‘ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಆಗಸ್ಟ್‌ನಲ್ಲಿ 15 ಲಕ್ಷ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಸೆಂಟರ್ ಫಾರ್‌ ಮಾನಿಟರಿಂಗ್ ಇಂಡಿಯನ್ ಎಕಾನಮಿಯ(ಸಿಎಂಐಇ) ದತ್ತಾಂಶ ಆಧರಿಸಿ ಪ್ರಕಟಿಸಿರುವ ಮಾಧ್ಯಮದ ವರದಿಯ ಸ್ಕ್ರೀನ್‌ ಶಾಟ್‌ ಅನ್ನು ಟ್ಯಾಗ್‌ ಮಾಡಿದ್ದಾರೆ.

‘ಉದ್ಯೋಗದ ವಿಷಯದಲ್ಲಿ ಮೋದಿ ಸರ್ಕಾರ ಮಾರಕವಾಗಿದೆ. ಈ ಸರ್ಕಾರ ‘ತನ್ನ ಸ್ನೇಹಿತರಿಗೆ‘ ಸಂಬಂಧವಿರದ ಯಾವುದೇ ವ್ಯಾಪಾರ, ಉದ್ಯೋಗವನ್ನು ಉತ್ತೇಜಿಸುವುದಿಲ್ಲ ಅಥವಾ ಬೆಂಬಲಿಸುವುದೂ ಇಲ್ಲ. ಬದಲಿಗೆ, ಬೇರೆಯವರಿಂದ ಉದ್ಯೋಗವನ್ನು ಕಿತ್ತು ಕೊಳ್ಳಲು ಪ್ರಯತ್ನಿಸುತ್ತಿದೆ‘ ಎಂದು ರಾಹುಲ್ ಆರೋಪಿಸಿದ್ದಾರೆ.

‘ತೋರಿಕೆಗಾಗಿ ಸರ್ಕಾರ ದೇಶದ ಜನರಿಂದ ಸ್ವಾಭಿಮಾನವನ್ನು ನಿರೀಕ್ಷಿಸುತ್ತಿದೆ‘ ಎಂದು ಟ್ವೀಟ್‌ ಮಾಡಿರುವ ರಾಹುಲ್‌, ‘ಇದನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ನೀಡಲಾಗಿದೆ‘ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT