ಕೋಲ್ಕತಾ: ಬಹು ನಂಬಿಕೆಗಳ ಮೇಲೆ ರಚನೆಗೊಂಡಿರುವ ಪ್ರಜಾಪ್ರಭುತ್ವದ ಪಾವಿತ್ರ್ಯವನ್ನು ಮೋದಿ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ಹಾಳುಗೆಡವಿದೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಕೋಲ್ಕತಾದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಆ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಭಾಷಣ ಮಾಡಲು ಆಹ್ವಾನಿಸಲಾಯಿತು. ಮಮತಾ ಅವರ ಭಾಷಣಕ್ಕೂ ಮುನ್ನ 'ಜೈ ಶ್ರೀರಾಮ್' ಎಂಬ ಘೋಷಣೆ ಕೂಗಲಾಯಿತು.

ಇದಕ್ಕೆ ಆಕ್ರೋಶಗೊಂಡ ಮಮತಾ, 'ಇದು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಇದೊಂದು ಸರ್ಕಾರಿ ಕಾರ್ಯಕ್ರಮ. ಇದಕ್ಕೊಂದು ಘನತೆ ಇರಬೇಕು. ಆಹ್ವಾನಿಸುವುದು ಮತ್ತು ಅವಮಾನಿಸುವುದು ಯಾರಿಗೂ ಇಷ್ಟವಾಗುವುದಿಲ್ಲ. ನಾನು ಮಾತನಾಡುವುದಿಲ್ಲ. ಜೈ ಬಂಗಾಳ, ಜೈ ಹಿಂದ್' ಎಂದು ತಮ್ಮ ಭಾಷಣವನ್ನು ನಿಲ್ಲಿಸಿದ್ದರು.

ಈ ಘಟನೆಯ ಬಗ್ಗೆ ಮಾತನಾಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, 'ಬಹು ನಂಬಿಕೆಗಳ ಮೇಲೆ ರಚನೆಗೊಂಡಿರುವ ಪ್ರಜಾಪ್ರಭುತ್ವದ ಪಾವಿತ್ರ್ಯವನ್ನು ಮೋದಿ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ಹಾಳುಗೆಡವಿದೆ. ಅದೊಂದು ಸರ್ಕಾರಿ ಕಾರ್ಯಕ್ರಮವಾಗಿದೆ. ಅಲ್ಲಿ ಧಾರ್ಮಿಕ ಘೋಷಣೆಗಳನ್ನು ಕೂಗುವುದು ಅಸಂಬದ್ಧ. ಜಾತ್ಯತೀತ ಪ್ರಜಾಪ್ರಭುತ್ವದಲ್ಲಿ ಇದಕ್ಕೆ ಜಾಗವಿಲ್ಲ. ಈ ರೀತಿಯ ಅಸಂಬದ್ಧತೆಯನ್ನು ಬಿಜೆಪಿಯ ಅಶಿಕ್ಷಿತ ಜನರು ಮಾತ್ರ ಸಮರ್ಥಿಸಬಲ್ಲರು' ಎಂದು ಹೇಳಿದ್ದಾರೆ.

ಬೋಸ್ ಅವರ 125ನೇ ಜಯಂತಿ ದಿನವಾದ ಇಂದು (ಜ.23) ಪ್ರಥಮ ‘ಪರಾಕ್ರಮ ದಿವಸ್’ ಕಾರ್ಯಕ್ರಮ ಕೋಲ್ಕತಾದಲ್ಲಿ ನಡೆದಿದೆ.

1897 ರಲ್ಲಿ ಈ ದಿನ ಜನಿಸಿದ ಬೋಸ್ ಅವರ ಜನ್ಮದಿನಾಚರಣೆಯ ನೆನಪಿಗಾಗಿ ಜನವರಿ 23 ಅನ್ನು 'ಪರಾಕ್ರಮ ದಿವಸ್' ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.