ಬುಧವಾರ, ಸೆಪ್ಟೆಂಬರ್ 29, 2021
20 °C

ಟೈಮ್‌ ಪ್ರಭಾವಿಗಳ ಪಟ್ಟಿಯಲ್ಲಿ ಮೋದಿ, ಮಮತಾ

ಪಿಟಿಐ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌ : ಟೈಮ್‌ ನಿಯತಕಾಲಿಕವು ಸಿದ್ಧಪಡಿಸಿದ 2021ರ ಜಾಗತಿಕ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸೀರಂ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾದ ಸಿಇಒ ಅದಾರ್‌ ಪೂನಾವಾಲಾ ಇದ್ದಾರೆ.

ನೂರು ಪ್ರಭಾವಿಗಳ ಹೆಸರಿನ 2021ರ ವಾರ್ಷಿಕ ಪಟ್ಟಿಯನ್ನು ಟೈಮ್‌ ಬುಧವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌,
ಬ್ರಿಟನ್ ರಾಜಮನೆತನದ ರಾಜಕುಮಾರ ಹ್ಯಾರಿ ಹಾಗೂ ಮೇಘನ್‌ ದಂಪತಿ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೂ ಇದ್ದಾರೆ.

ತಾಲಿಬಾನ್‌ನ ಸಹಸಂಸ್ಥಾಪಕ ಮುಲ್ಲಾ ಅಬ್ದುಲ್‌ ಘನಿ ಬರದರ್‌ ಹೆಸರೂ  ‍ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು