ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆ್ನ್ಸ್ಕಿ ನಡುವೆ ನೇರ ಮಾತುಕತೆಗೆ ಸೂಚಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಉಕ್ರೇನ್ನಲ್ಲಿನ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆಗಿನ ವರ್ಚುವಲ್ ಸಭೆಯ ಸಂದರ್ಭದಲ್ಲಿ ಪ್ರಧಾನಿಮೋದಿ ಈ ಹೇಳಿಕೆ ನೀಡಿದ್ದಾರೆ. ಉಕ್ರೇನ್ನ ಬುಕಾದಲ್ಲಿ ನಾಗರಿಕರ ಹತ್ಯೆಯ ಸುದ್ದಿ ವಿಶೇಷವಾಗಿ ಕಳವಳಕಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವರ್ಚುವಲ್ ಮಾತುಕತೆ ನಡೆಸಿದರು.

ಉಕ್ರೇನ್ ಮೇಲಿನ ಆಕ್ರಮಣಕ್ಕಾಗಿ ರಷ್ಯಾದ ಮೇಲೆ ಆರ್ಥಿಕ ಒತ್ತಡವನ್ನು ಹೇರಲು ಅಮೆರಿಕ ಭಾರತದಿಂದ ಹೆಚ್ಚಿನ ಸಹಾಯವನ್ನು ಬಯಸುತ್ತಿರುವಾಗ ಈ ಮಾತುಕತೆ ನಡೆದಿದೆ.

ಬೈಡನ್ ಮತ್ತು ಮೋದಿ ಇಬ್ಬರೂ ಉಕ್ರೇನ್ನಲ್ಲಿ ವಿಶೇಷವಾಗಿ ಬುಕಾದಲ್ಲಿ ಅನೇಕ ನಾಗರಿಕರನ್ನು ಕೊಲ್ಲಲ್ಪಟ್ಟ ವಿನಾಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದೇವೇಳೆ, ಭಾರತದಿಂದ ರಷ್ಯಾದ ಇಂಧನ ಆಮದುಗಳಲ್ಲಿ ಏರಿಕೆಯನ್ನು ನೋಡಲು ಬಯಸುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.