ನವದೆಹಲಿ: ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ)ರಾಜ್ಯಗಳಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಲು ವಿಫಲವಾಗಿದೆ ಎಂದು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

‘ಕೇಂದ್ರ ಸರ್ಕಾರವು ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರದ ಭರವಸೆಯನ್ನು ನೀಡಿದೆ. ಆದರೆ ರಾಜ್ಯಗಳಿಗೆ ನೀಡಲು ಕೇಂದ್ರದ ಬಳಿ ಹಣವೇ ಇಲ್ಲ. ಸಾಲ ತೆಗೆದುಕೊಳ್ಳಿ ಎಂದು ಹಣಕಾಸು ಸಚಿವರು ತಿಳಿಸುತ್ತಾರೆ. ಇದರ ನಡುವೆ ಪ್ರಧಾನಿಯವರು ಉದ್ಯಮಗಳಿಗೆ ₹1.4 ಲಕ್ಷ ಕೋಟಿ ತೆರಿಗೆ ವಿನಾಯಿತಿ ನೀಡುತ್ತಾರೆ. ತಮಗಾಗಿ ₹8400 ಕೋಟಿ ವೆಚ್ಚದ ಎರಡು ವಿಮಾನಗಳನ್ನು ಖರೀದಿಸುತ್ತಾರೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಟೀಕಿಸಿದ್ದಾರೆ.

‘ರಾಜ್ಯಗಳ ಮುಖ್ಯಮಂತ್ರಿಗಳು ಮೋದಿಗಾಗಿ ಜನರ ಭವಿಷ್ಯವನ್ನು ಏಕೆ ಅಡಮಾನ ಇರಿಸಬೇಕು’ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಜಿಎಸ್‌ಟಿ ಮಂಡಳಿ ಸಭೆ ನಡೆಯುವ ದಿನವೇ ರಾಹುಲ್ ಈ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.