ಭಾನುವಾರ, ಜೂನ್ 20, 2021
20 °C

ಎಲ್ಲರಿಗೂ ಕೋವಿಡ್ ಲಸಿಕೆ, ಔಷಧಿ: ಆಸ್ಟ್ರೇಲಿಯಾದ ಪ್ರಧಾನಿ ಜತೆ ಮೋದಿ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್–19 ಲಸಿಕೆಗಳು ಮತ್ತು ಔಷಧಿಗಳ ಕೈಗೆಟುಕುವ ಬೆಲೆ ಮತ್ತು ಸಮಾನ ಹಂಚಿಕೆಯನ್ನು ಖಾತರಿಪಡಿಸುವ ಮಹತ್ವದ ಕ್ರಮಕ್ಕೆ ಭಾರತ ಮತ್ತು ಆಸ್ಟ್ರೇಲಿಯಾದ ಪ್ರಧಾನಿಗಳು ಒಪ್ಪಿಗೆ ಸೂಚಿಸಿದ್ದಾರೆ.

ಈ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಸಂಭವನೀಯ ಕ್ರಮದ ಕುರಿತು ಶುಕ್ರವಾರ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಅವರೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ದೂರವಾಣಿಯಲ್ಲಿ ಮಾತುಕತೆ ನಡೆಸಿದರು.

ಇಂಡೋ ಫೆಸಿಫಿಕ್ ಪ್ರಾಂತ್ಯವನ್ನೊಳಗೊಂಡ ಪ್ರದೇಶದಲ್ಲಿ  ಭಾರತ ಮತ್ತು ಆಸ್ಟ್ರೇಲಿಯಾವು ನಿಯಮಾಧಾರಿತ ಅಂತರರಾಷ್ಟ್ರೀಯ ಆದೇಶ ಮತ್ತು ಮುಕ್ತ ಹಾಗೂ ಅಂತರ್ಗತವಾಗಿ ಒಟ್ಟಾಗಿ ಕಾರ್ಯನಿರ್ವಹಿಸುವ ಮಹತ್ವವನ್ನು ಪ್ರತಿಪಾದಿಸಿದವು.

ಕೋವಿಡ್ ಎರಡನೇ ಅಲೆಯಲ್ಲಿ ನಲಗುತ್ತಿರುವ ಭಾರತಕ್ಕೆ ಬೆಂಬಲ ವಿಸ್ತರಿಸಿದ್ದಕ್ಕಾಗಿ ಆಸ್ಟ್ರೇಲಿಯಾವನ್ನು ಶ್ಲಾಘಿಸಿದರು ಎಂದು ಪ್ರಧಾನಿ ಕಚೇರಿಯ ಪ್ರಕಟಣೆಯು ತಿಳಿಸಿದೆ.

‘ಲಸಿಕೆ ಮತ್ತು ಔಷಧಿಗಳು ಕೈಗೆಟುಕುವ ದರ ಮತ್ತು ಸಮಾನ ಲಭ್ಯತೆಯನ್ನು ಖಾತರಿಪಡಿಸುವ ಮಹತ್ವವನ್ನು ನಾವು ಒಪ್ಪಿಕೊಂಡಿದ್ದು, ಈ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಮುಂದಿನ ಉಪಕ್ರಮಗಳ ಬಗ್ಗೆಯೂ ಚರ್ಚಿಸಿದ್ದೇವೆ’ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು