ನವದೆಹಲಿ: ‘ಪ್ರಾದೇಶಿಕ ಸ್ಥಿರತೆಯನ್ನು ಬಲಪಡಿಸಲು ಭಾರತ ಮತ್ತು ವಿಯೆಟ್ನಾಂ ನಡುವಣ ಬಾಂಧವ್ಯ ಉತ್ತಮ ಕೊಡುಗೆ ನೀಡಬಲ್ಲದು’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ಹ್ ಚಿನ್ಹ್ ಜೊತೆ ದೂರವಾಣಿಯಲ್ಲಿ ಚರ್ಚಿಸಿದ ಅವರು, ‘ಉಭಯ ದೇಶಗಳು ಮುಕ್ತ, ಸೇರ್ಪಡೆಯುಕ್ತ, ಶಾಂತಿಯುತವಾದ ನಿಯಮಾಧಾರಿತ ದೃಷ್ಟಿಕೋನವನ್ನು ಹೊಂದಿವೆ’ ಎಂದು ಹೇಳಿದರು.
ವಿಯೆಟ್ನಾಂ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಅಭಿನಂದಿಸಿದ ಅವರು, ಭಾರತ ಮತ್ತು ವಿಯೆಟ್ನಾಂ ನಡುವಣ ಕಾರ್ಯಕಾರಿ ಪಾಲುದಾರಿಕೆ ಮುಂದುವರಿಯಲಿದ್ದು, ಇನ್ನಷ್ಟು ಬಲಗೊಳ್ಳಲಿದೆ ಎಂದಿದ್ದಾರೆ.
ಭಾರತ ಮತ್ತು ವಿಯೆಟ್ನಾಂ ಉಭಯ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಾಗಿವೆ ಎಂಬುದನ್ನು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.