ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಲೋಕಸಭೆಯ ಕಲಾಪಕ್ಕೆ ಹಾಜರಾಗಿದ್ದರು.
ಸದನದಲ್ಲಿ ಕಲಾಪ ಆರಂಭಕ್ಕೂ ಮುನ್ನ ರಾಹುಲ್ ಗಾಂಧಿ, ಪಕ್ಷದ ಸಂಸದರ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಕೂಡ ಉಪಸ್ಥಿತರಿದ್ದರು.
ವಿವಿಧ ವಿಷಯಗಳ ಗದ್ದಲದ ನಡುವೆ ಸದನವನ್ನು ಮುಂದೂಡಲಾಯಿತು.ಈ ವೇಳೆ ರಾಹುಲ್ ಗಾಂಧಿ ಸಂಸತ್ತನ್ನು ತೊರೆದರು.
‘ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡರೆ ಹೇಗೆ?’ ಎಂಬ ರಾಹುಲ್ ಗಾಂಧಿ ಹೇಳಿಕೆ ಸಂಬಂಧ ಅವರಿಗೆ ಸೂರತ್ ನ್ಯಾಯಾಲಯವು 2 ವರ್ಷ ಶಿಕ್ಷೆ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಅವರಿಗೆ ಮ್ಯಾಜಿಸ್ಟ್ರೇಟ್ ಎಚ್.ಎಚ್ ವರ್ಮಾ ಜಾಮೀನು ಮಂಜೂರು ಮಾಡಿದ್ದಾರೆ. ಶಿಕ್ಷೆ ಅಮಾನತುಗೊಳಿಸುವ ಪ್ರಕ್ರಿಯೆ ಸಂಬಂಧ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ.
ಮೇಲ್ಮನವಿ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದರೆ ಗಾಂಧಿ ಅವರು ಸಂಸತ್ತಿನ ಸದಸ್ಯತ್ವದಲ್ಲಿಯೇ ಮುಂದುವರೆಯಬಹುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.