ಬುಧವಾರ, ಜನವರಿ 19, 2022
18 °C
ಸಮಾಜವಾದಿ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಕೆಂಪು ಟೋಪಿ ಧರಿಸಿದವರು ಉತ್ತರ ಪ್ರದೇಶಕ್ಕೆ ಅಪಾಯಕಾರಿ: ಪ್ರಧಾನಿ ಮೋದಿ ವಾಗ್ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಖನೌ: ‘ಉತ್ತರ ಪ್ರದೇಶ ಜನರು ಸಮಾಜವಾದಿ ಪಕ್ಷವನ್ನು (ಎಸ್‌ಪಿ) ಬೆಂಬಲಿಸುವ ಮುನ್ನ ಎಚ್ಚರಿಕೆ ವಹಿಸಬೇಕು. ಕೆಂಪು ಟೋಪಿ ಧರಿಸುವವರು ರಾಜ್ಯಕ್ಕೆ ಅಪಾಯಕಾರಿ’ ಎಂದು ಹೇಳುವ ಮೂಲಕ ಎಸ್‌ಪಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ತವರು ಗೋರಖ್‌ಪುರದಲ್ಲಿ ರಾಸಾಯನಿಕ ಗೊಬ್ಬರ ಕಾರ್ಖಾನೆ ಹಾಗೂ ಎಐಐಎಂಎಸ್‌ ಶಾಖೆ ಉದ್ಘಾಟಿಸಿದ ನಂತರ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

‘ಕೆಂಪು ಟೋಪಿ ಧರಿಸುವ ಈ ಜನರಿಗೆ ಸಾಮಾನ್ಯ ಜನರ ಬಗ್ಗೆ ಕಳಕಳಿ ಇಲ್ಲ. ಕೆಂಪು ಬಣ್ಣ ಅಪಾಯದ ಸಂಕೇತ. ರೆಡ್‌ ಕ್ಯಾಪ್‌ (ಕೆಂಪು ಟೋಪಿ) ಎಂದರೆ, ಉತ್ತರ ಪ್ರದೇಶ ಪಾಲಿಗೆ ‘ರೆಡ್‌ ಅಲರ್ಟ್‌’ ಇದ್ದ ಹಾಗೆ’ ಎಂದು ಟೀಕಿಸಿದರು.

‘ತಮ್ಮ ತಿಜೋರಿಯನ್ನು ಭರ್ತಿ ಮಾಡಿಕೊಳ್ಳುವ ಸಲುವಾಗಿ ಸಮಾಜವಾದಿ ಪಕ್ಷದ ನಾಯಕರಿಗೆ ಅಧಿಕಾರ ಬೇಕಾಗಿತ್ತು. ಜೈಲುಗಳಲ್ಲಿರುವ ಉಗ್ರರ ಬಿಡುಗಡೆ ಹಾಗೂ ಪಾತಕಿಗಳಿಗೆ ಮುಕ್ತ ಅವಕಾಶ ನೀಡುವುದಕ್ಕಾಗಿಯೂ ಅಧಿಕಾರ ಬೇಕಿತ್ತು’ ಎಂದು ವಾಗ್ದಾಳಿ ನಡೆಸಿದರು.

‘ಸಮಾಜವಾದಿ ಚಿಂತಕರಾದ ರಾಮಮನೋಹರ್‌ ಲೋಹಿಯಾ ಹಾಗೂ ಜಯಪ್ರಕಾಶ್ ನಾರಾಯಣ್ ಅವರು ಪ್ರತಿಪಾದಿಸಿದ ತತ್ವಗಳನ್ನು ಸಮಾಜವಾದಿ ಪಕ್ಷ ಪಾಲನೆ ಮಾಡುತ್ತಿಲ್ಲ’ ಎಂದು ಟೀಕಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು