ಮಂಗಳವಾರ, ಜೂನ್ 22, 2021
27 °C

ಕಿಸಾನ್‌ ಸಮ್ಮಾನ್‌ ಯೋಜನೆಯ 8ನೇ ಕಂತು ಶುಕ್ರವಾರ ಬಿಡುಗಡೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ (ಪಿಎಂ–ಕಿಸಾನ್‌) ಯೋಜನೆಯಡಿ 8ನೇ ಕಂತಿನ ಹಣವನ್ನು ಶುಕ್ರವಾರ (ಮೇ 14) ಬಿಡುಗಡೆ ಮಾಡುವರು.

ವಿಡಿಯೊ ಕಾನ್ಫರೆನ್ಸ್‌ ವಿಧಾನದ ಮೂಲಕ ನಡೆಯುವ ಕಾರ್ಯಕ್ರಮದಲ್ಲಿ 9.5 ಕೋಟಿಗೂ ಅಧಿಕ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ₹ 19,000 ಕೋಟಿಗೂ ಅಧಿಕ ಮೊತ್ತವನ್ನು ವರ್ಗಾಯಿಸಲಾಗುವುದು ಎಂದು ಪ್ರಧಾನ ಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇದೇ ಕಾರ್ಯಕ್ರಮದಲ್ಲಿ ಮೋದಿಯವರು ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್ ಸಹ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು