ಸೋಮವಾರ, ಡಿಸೆಂಬರ್ 5, 2022
19 °C

ಕಾಶಿ–ತಮಿಳು ಸಮಾಗಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಕಾಶಿ–ತಮಿಳು ಸಮಾಗಮ ಕಾರ್ಯಕ್ರಮಕ್ಕೆ ಔಪಚಾರಿಕ ಚಾಲನೆ ನೀಡಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಒಂದು ತಿಂಗಳ ಕಾಲ ನಡೆಯುವ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ. ಸ್ವಕ್ಷೇತ್ರದಲ್ಲಿ ಪ್ರಧಾನಿ 3 ಗಂಟೆಗಳ ಕಾಲ ಇರಲಿದ್ದಾರೆ ಎಂದು ಮಹಾನಗರ್‌ ಅಧ್ಯಕ್ಷ ವಿದ್ಯಾಸಾಗರ್‌ ರೈ ಹೇಳಿದ್ದಾರೆ. 

ಬನಾರಸ್‌ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಮೈದಾನದಲ್ಲಿ ಪ್ರಧಾನಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದು ಕೇಂದ್ರ ಸರ್ಕಾರದ ‘ಆಜಾದಿ ಕ ಅಮೃತ್‌ ಮಹೋತ್ಸವ್‌’ ಕಾರ್ಯಕ್ರಮದ ಭಾಗವಾಗಿದೆ. 

‘ಒಂದು ಭಾರತ, ಶ್ರೇಷ್ಠ ಭಾರತ’ ಎಂಬ ಉದ್ದೇಶದ ಕಾರ್ಯಕ್ರಮ ತಮಿಳು ಭಾಷೆ ಮತ್ತು ಸಂಸ್ಕೃತಿಯ ಅನಾವರಣವಾಗಿದೆ. ನ.17ರಿಂದ ಡಿ.16ರವರೆಗೆ ಕಾರ್ಯಕ್ರಮ ಜರುಗಲಿದೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು