ಶನಿವಾರ, ಡಿಸೆಂಬರ್ 3, 2022
26 °C

ಉನ್ನತ ಶಿಕ್ಷಣ ಸಂಸ್ಥೆಗಳ ಮಾನ್ಯತೆ: ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸಮಿತಿ ರಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉನ್ನತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆಯನ್ನು ಬಲಪಡಿಸಲು ಕೇಂದ್ರ ಶಿಕ್ಷಣ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.

ಐಐಟಿ ಕಾನ್ಪುರದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ರಾಧಾಕೃಷ್ಣನ್‌ ಅವರು ಸಮಿತಿಯ ಮುಖ್ಯಸ್ಥರಾಗಿರುವರು. ಅವರು ಐಐಟಿ ಮಂಡಳಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಅಸ್ಸಾಂನ ಮಹಾಪುರುಷ ಶ್ರೀಮಂತ ಶಂಕರದೇವ ವಿಶ್ವವಿದ್ಯಾಲಯ ಕುಲಪತಿ ಮೃದುಲ್‌ ಹಜಾರಿಕಾ, ಐಐಎಂ ಲಖನೌನ ಪ್ರಾಧ್ಯಾಪಕ ಭರತ್‌ ಭಾಸ್ಕರ್‌ ಮತ್ತು ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಸಮಿತಿಯ ಸದಸ್ಯರಾಗಿದ್ದಾರೆ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

‘ಮೌಲ್ಯಮಾಪನ ಮತ್ತು ಮಾನ್ಯತೆ ಪ್ರಕ್ರಿಯೆಯನ್ನು ಬಲಪಡಿಸುವುದು ಮತ್ತು 2020ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ರೂಪಿಸಲಾದ ರಾಷ್ಟ್ರೀಯ ಮಾನ್ಯತಾ ಮಂಡಳಿಯ ರೂಪುರೇಷೆಗಳನ್ನು ಸಿದ್ಧಪಡಿಸುವ ಕಾರ್ಯವನ್ನು ಈ ಸಮಿತಿ ನಿರ್ವಹಿಸಲಿದೆ’ ಎಂದೂ ವಿವರಿಸಿದ್ದಾರೆ.

‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟ ಮತ್ತು ಕಾರ್ಯನಿರ್ವಹಣೆಯಲ್ಲಿ ಮಾನ್ಯತೆಯು ಪ್ರಮುಖ ಪಾತ್ರವಹಿಸುತ್ತದೆ. ಮಾನ್ಯತೆ ನೀಡುವ ಪ್ರಕ್ರಿಯೆಯಿಂದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು