ಭಾನುವಾರ, ಮೇ 22, 2022
22 °C

ಮೊಹಾಲಿ ಸ್ಫೋಟ: ಐವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಪಂಜಾಬ್‌ನ ಮೊಹಾಲಿಯಲ್ಲಿರುವ ಪೊಲೀಸ್‌ ಗುಪ್ತಚರ ವಿಭಾಗದ ಕೇಂದ್ರ ಕಚೇರಿ ಮೇಲೆ ರಾಕೆಟ್‌ ಚಾಲಿತ ಗ್ರೆನೇಡ್‌(ಆರ್‌ಪಿಜಿ) ದಾಳಿ ನಡೆಸಿದ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರೆಲ್ಲರಿಗೂ ಉಗ್ರ ಸಂಘಟನೆ ಬಬ್ಬರ್ ಖಲಸಾ ಇಂಟರ್‌ನ್ಯಾಷನಲ್‌ ಮತ್ತು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಜೊತೆ ಸಂಪರ್ಕವಿದೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸ್‌ ಮಹಾನಿರ್ದೇಶಕ ವಿ.ಕೆ.ಭಾವರ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಂಜಾಬ್‌ನ ತರ್ನ್‌ ತರಾನ ನಿವಾಸಿ ಲಿಖ್ಬಿರ್‌ ಸಿಂಗ್‌ ಈ ಪ್ರಕರಣದ ಪ್ರಮುಖ ಸಂಚುಕೋರ. ಈತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ  ಹರ್ವಿಂದರ್‌ ಸಿಂಗ್‌ ರಿಂದಾ ಆಪ್ತ ಸಹಚರ ಎಂದು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು