ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಸದಸ್ಯತ್ವ ಮರುಸ್ಥಾಪಿಸಿದ ಲೋಕಸಭಾ ಕಾರ್ಯಾಲಯ

Last Updated 29 ಮಾರ್ಚ್ 2023, 10:05 IST
ಅಕ್ಷರ ಗಾತ್ರ

ನವದೆಹಲಿ: ಕ್ರಿಮಿನಲ್ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಅನರ್ಹಗೊಂಡಿದ್ದ ಲಕ್ಷದ್ವೀಪದ ಸಂಸದ, ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಸದಸ್ಯತ್ವವನ್ನು ಲೋಕಸಭೆ ಕಾರ್ಯಾಲಯ ಬುಧವಾರ ಮರುಸ್ಥಾಪಿಸಿದೆ.

ಜನವರಿಯಲ್ಲಿ ಲಕ್ಷದ್ವೀಪದ ಸೆಷನ್ಸ್ ನ್ಯಾಯಾಲಯ, 2009ರ ಕೊಲೆ ಯತ್ನ ಪ್ರಕರಣದಲ್ಲಿ ಫೈಜಲ್ ಸೇರಿದಂತೆ ನಾಲ್ವರು ಅಪರಾಧಿಗಳಿಗೆ 10 ವರ್ಷ ಜೈಲು ಮತ್ತು ತಲಾ ಒಂದು ಲಕ್ಷ ದಂಡ ವಿಧಿಸಿತ್ತು.

ಈ ತೀರ್ಪಿನ ವಿರುದ್ಧ ಫೈಜಲ್ ಅವರು ಕೇರಳ ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಶಿಕ್ಷೆಯನ್ನು ಅಮಾನತುಗೊಳಿಸಿತ್ತು.

ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದ ಫೈಜಲ್, ಈ ಸಂಬಂಧ ಮಂಗಳವಾರದಂದು ಸುರ್ಪೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಸುಪ್ರೀ ಕೋರ್ಟ್‌ನಲ್ಲಿ ವಿಚಾರಣೆ ಆರಂಭವಾಗುವ ಮುನ್ನವೇ ಅನರ್ಹತೆಯನ್ನು ಮರುಸ್ಥಾಪಿಸಲಾಗಿದೆ.

ಕೇರಳ ಹೈಕೋರ್ಟ್ ಜನವರಿ 25ರಂದು ಶಿಕ್ಷೆ ಅಮಾನತುಗೊಳಿಸಿ ಆದೇಶ ಹೊರಡಿಸಿದ ತಕ್ಷಣ ನನ್ನ ಲೋಕಸಭಾ ಸದಸ್ಯತ್ವ ಮರುಸ್ಥಾಪಿಸಬೇಕಿತ್ತು ಎಂದು ಫೈಜಲ್ ಪ್ರತಿಕ್ರಿಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT