ಭಾನುವಾರ, ಮಾರ್ಚ್ 7, 2021
29 °C

ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್‌ ಡೇಲ್ಕರ್ ಶಂಕಾಸ್ಪದ ಸಾವು, ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಸಂಸದ ಮೋಹನ್‌ ಡೇಲ್ಕರ್‌ (58) ಅವರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಅವರ ಶವ ಸೋಮವಾರ ದಕ್ಷಿಣ ಮುಂಬೈನ ಮರಿನಾ ಡ್ರೈವ್‌ ಹೋಟೆಲ್‌ನಲ್ಲಿ ಪತ್ತೆಯಾಗಿದೆ. ಸಾವಿನ ಕಾರಣ ತಿಳಿದುಬಂದಿಲ್ಲ.

ಪಕ್ಷೇತರ ಸದಸ್ಯರಾಗಿದ್ದ ಡೇಲ್ಕರ್ (58) ಲೋಕಸಭೆಯಲ್ಲಿ ದಾದ್ರಾ ಮತ್ತು ನಗರ ಹವೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. 2019ರ ಚುನಾವಣೆಯಲ್ಲಿ ಏಳನೇ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದರು.

ಇವರಿಗೆ ಪತ್ನಿ, ಒಬ್ಬ ಮಗ, ಒಬ್ಬ ಮಗಳು ಇದ್ದಾರೆ. ‘ಸಾವಿಗೆ ಮುನ್ನ ಗುಜರಾತಿಯಲ್ಲಿ ಬರೆದಿರುವ ಪತ್ರ ದೊರೆತಿದೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಬಹುದು’ ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.

ಪ್ರಾಥಮಿಕ ವರದಿ ಆಧರಿಸಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದು, ತನಿಖೆ ನಡೆದಿದೆ. ಇವರು, ಸಂಸತ್ತಿನ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಸ್ಥಾಯಿ ಸಮಿತಿಯ ಸದಸ್ಯರೂ ಆಗಿದ್ದರು.

‌ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಅವರು ವಕೀಲರಾಗಿದ್ದು, ಕಾರ್ಮಿಕ ನಾಯಕರಾಗಿ ತಮ್ಮ ಸಾರ್ವಜನಿಕ ಬದುಕು ಆರಂಭಿಸಿದ್ದು, ದಾದ್ರಾ, ನಗರ ಹವೇಲಿ ಕ್ಷೇತ್ರದಿಂದ ಮೊದಲ ಬಾರಿಗೆ 9ನೇ ಲೋಕಸಭೆಗೆ ಆಯ್ಕೆಯಾಗಿದ್ದರು. 2009 ಮತ್ತು 2014ರಲ್ಲಿ ಪರಾಜಿತರಾಗಿದ್ದರು. ಆದರೆ, 17ನೇ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.

1989, 1991 ಮತ್ತು 1996ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಘಿ, 1998ರಲ್ಲಿ ಬಿಜೆಪಿ ‌ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು