ಮಂಗಳವಾರ, ಸೆಪ್ಟೆಂಬರ್ 28, 2021
22 °C
ಕೆಲ ಮುಖಂಡರಿಂದ ‘ಜಿ–23’ ದುರ್ಬಳಕೆ: ಅಸಮಾಧಾನ

ಪ್ರಶಾಂತ್‌ ಕಿಶೋರ್‌ ಕಾಂಗ್ರೆಸ್‌ ಸೇರ್ಪಡೆಗೆ ಮೊಯಿಲಿ ಬೆಂಬಲ

ಪಿಟಿಐ Updated:

ಅಕ್ಷರ ಗಾತ್ರ : | |

ವೀರಪ್ಪ ಮೊಯಿಲಿ

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಕ್ಕೆ ಕಾಂಗ್ರೆಸ್‌ನ ಹಿರಿಯ ಮುಖಂಡ ವೀರಪ್ಪ ಮೊಯಿಲಿ ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.

‘ಸಂಘಟನೆಯಲ್ಲಿ ಸುಧಾರಣೆ ತರುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಹೀಗಾಗಿ ಪ್ರಶಾಂತ್‌ ಕಿಶೋರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಕ್ಕೆ ವಿರೋಧ ವ್ಯಕ್ತಪಡಿಸುವವರು ಸುಧಾರಣಾ ವಿರೋಧಿಗಳು’ ಎಂದು ಮೊಯಿಲಿ ಪ್ರತಿಪಾದಿಸಿದರು.

ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಸಂಘಟನೆಯ ಸಮಗ್ರ ಸುಧಾರಣೆಗಾಗಿ ಕಳೆದ ವರ್ಷ 23 ಜನ ಮುಖಂಡರು (ಜಿ–23) ಸೋನಿಯಾ ಗಾಂಧಿ ಅವರಿಗೆ ಬರೆದಿದ್ದೆವು. ಪಕ್ಷವನ್ನು ಬೇರು ಮಟ್ಟದಿಂದ ಬಲಪಡಿಸುವ ಹಾಗೂ ಸುಧಾರಣೆ ತರುವ ಏಕೈಕ ಉದ್ದೇಶದೊಂದಿಗೆ ನನ್ನನ್ನೂ ಸೇರಿದಂತೆ ಕೆಲ ಮುಖಂಡರು ಈ ಪತ್ರಕ್ಕೆ ಸಹಿ ಹಾಕಿದ್ದೆವು ಹೊರತು ಪಕ್ಷವನ್ನು ನಾಶ ಮಾಡುವ ಉದ್ದೇಶವಿರಲಿಲ್ಲ’ ಎಂದು ಹೇಳಿದ್ದಾರೆ.

‘ಅದಾಗಲೇ, ಪಕ್ಷದಲ್ಲಿ ಸುಧಾರಣೆ ತರಲು ಸೋನಿಯಾ ಗಾಂಧಿಯವರು ಚಿಂತನೆ ನಡೆಸಿದ್ದರು. ಆದರೆ, ಕೆಲವು ಮುಖಂಡರು ಈ ರೀತಿ ಪತ್ರ ಬರೆದಿದ್ದನ್ನು ದುರುಪಯೋಗಪಡಿಸಿಕೊಂಡರು. ಈ ರೀತಿ ಧ್ವನಿ ಎತ್ತುವುದಕ್ಕೆ ಸಾಂಸ್ಥಿಕ ರೂಪ ನೀಡಿದ್ದೇ ಆದರೆ ಅದು ಪಟ್ಟಭದ್ರ ಹಿತಾಸಕ್ತಿಗಳನ್ನು ಬೆಂಬಲಿಸಿದಂತಾಗುತ್ತದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು