ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯದಲ್ಲಿ ಧರ್ಮದ ಬಳಕೆ ನಿಂತರೆ ದ್ವೇಷ ಭಾಷಣ ನಿಲ್ಲುತ್ತದೆ: ಸುಪ್ರೀಂ ಕೋರ್ಟ್

Last Updated 29 ಮಾರ್ಚ್ 2023, 14:05 IST
ಅಕ್ಷರ ಗಾತ್ರ

ನವದೆಹಲಿ: ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸುವುದರಿಂದ ದ್ವೇಷದ ಭಾಷಣಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯ ಪೀಠವು ದ್ವೇಷ ಭಾಷಣ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಬುಧವಾರ ನಡೆಸಿತು.

ಕೆಲವರು ದುರುದ್ದೇಶದಿಂದ ದ್ವೇಷದ ಭಾಷಣಗಳನ್ನು ಮಾಡುವ ಮೂಲಕ ಸಮಾಜದ ಶಾಂತಿ ಮತ್ತು ಸೌಹರ್ದತೆ ಕದಡಲು ಪ್ರಯತ್ನಿಸುತ್ತಾರೆ. ಆದರೆ, ಜನರು ಎಚ್ಚರಿಕೆ ವಹಿಸಬೇಕು ಎಂದು ಕೋರ್ಟ್ ಹೇಳಿದೆ.

ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿಗಳು, ದೂರದ ಪ್ರದೇಶಗಳು ಮತ್ತು ಮೂಲೆ ಮೂಲೆಗಳಿಂದ ಜನರು ಅವರ ಭಾಷಣ ಕೇಳಲು ಸೇರುತ್ತಿದ್ದರು ಎಂದು ಹೇಳಿದರು.

ಹೀಗೆ ನೋಡಿದರೆ ಎಷ್ಟು ಜನರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಪ್ರಾರಂಭಿಸಬಹುದು ಎಂದು ಆಶ್ಚರ್ಯ ವ್ಯಕ್ತಪಡಿಸಿದ ಪೀಠ, ಇತರ ನಾಗರಿಕರು ಅಥವಾ ಸಮುದಾಯಗಳನ್ನು ನಿಂದಿಸುವುದಿಲ್ಲ ಎಂದು ಭಾರತದ ಜನರು ಏಕೆ ಪ್ರತಿಜ್ಞೆ ತೆಗೆದುಕೊಳ್ಳಬಾರದು ಎಂದು ಹೇಳಿದೆ.

ದ್ವೇಷದ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಲು ವಿಫಲವಾಗಿರುವ ವಿವಿಧ ರಾಜ್ಯಗಳ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ದೈನಂದಿನ ಅಂಚಿನ ಅಂಶಗಳು ಟಿವಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸೇರಿದಂತೆ ಇತರರನ್ನು ನಿಂದಿಸಲು ಭಾಷಣಗಳನ್ನು ಮಾಡುತ್ತಿವೆ ಎಂದು ಪೀಠ ಹೇಳಿದೆ.

‘ಕೇವಲ ದೂರು ದಾಖಲಿಸುವುದರಿಂದ ದ್ವೇಷ ಭಾಷಣದ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ಎಫ್‌ಐಆರ್‌ಗಳಿಗೆ ಅನುಸಾರವಾಗಿ ಬೇರೆ ಯಾವುದಾದರೂ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ’ ಎಂದು ನ್ಯಾಯಪೀಠವು ಮಂಗಳವಾರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರನ್ನು ಪ್ರಶ್ನಿಸಿತು. ‘ದ್ವೇಷ ಭಾಷಣ ಸಂಬಂಧ ಈವರೆಗೂ ಒಟ್ಟು 18 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ’ ಎಂದು ಮೆಹ್ತಾ ಪೀಠಕ್ಕೆ ಹೇಳಿದ್ದರು.

ನ್ಯಾಯಪೀಠವು ಮೆಹ್ತಾ ಹಾಗೂ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಎಂ.ನಟರಾಜ್‌ ಅವರ ಆಕ್ಷೇಪದ ನಡುವೆಯೂ ಅರ್ಜಿಯ ವಿಚಾರಣೆ ಯನ್ನು ಬುಧವಾರಕ್ಕೆ ಮುಂದೂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT