ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ; ಜಾಮೀನು ಕೋರಿ ವಿಶೇಷ ಕೋರ್ಟ್‌ಗೆ ಅನಿಲ್‌ ದೇಶಮುಖ್ ಅರ್ಜಿ

Last Updated 4 ಜನವರಿ 2022, 11:04 IST
ಅಕ್ಷರ ಗಾತ್ರ

ಮುಂಬೈ: ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಕೋರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸಿಆರ್‌ಪಿಸಿ ಕಾಯ್ದೆ ಸೆಕ್ಷನ್‌ 167ರ ಅನ್ವಯ ಜಾಮೀನು ಮಂಜೂರು ಮಾಡಬೇಕು ಎಂದೂ ಮನವಿ ಮಾಡಿದ್ದಾರೆ. ಈ ನಿಯಮದ ಪ್ರಕಾರ, 60 ದಿನದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸದಿದ್ದರೆ ಅಥವಾ ಅದನ್ನು ಕೋರ್ಟ್ ಪರಿಗಣಿಸದೇ ಇದ್ದರೆ ಜಾಮೀನು ನೀಡಲು ಅವಕಾಶವಿದೆ.

ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ದೇಶಮುಖ್‌ ಅವರನ್ನು ನವೆಂಬರ್ 2, 2021ರಂದು ಬಂಧಿಸಿದೆ. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಸಿಆರ್‌ಪಿಸಿ ಸೆಕ್ಷನ್‌ 167ರ ಅನ್ವಯ ಜಾಮೀನು ಕೋರಿ ವಕೀಲ ಅನಿಕೇತ್ ನಿಕ್ಕಂ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವ ಮುನ್ನ ವಿಶೇಷ ಕೋರ್ಟ್ ಇ.ಡಿ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ನಿಯಮಾನುಸಾರ ನಿಗದಿತ ಅವಧಿಯಲ್ಲಿ ಪರಿಗಣಿಸಿಲ್ಲ. ನ್ಯಾಯಾಂಗ ಬಂಧನದ ಅವಧಿ 60 ದಿನ ಮೀರಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT