ಬುಧವಾರ, ಮಾರ್ಚ್ 29, 2023
31 °C

ಹಣ ಅಕ್ರಮ ವರ್ಗಾವಣೆ: ಅನಿಲ್‌ ದೇಶಮುಖ್‌ ಸಹಚರರು ನ್ಯಾಯಾಂಗ ವಶಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರ ಇಬ್ಬರು ಸಹಚರರನ್ನು ಪಿಎಂಎಲ್ಎ ವಿಶೇಷ ನ್ಯಾಯಾಲಯವು ಇದೇ 20ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದೇಶಮುಖ್ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಾಲಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂಧೆ ಅವರನ್ನು ಜಾರಿ ನಿರ್ದೇಶನಾಲಯವು ಜೂನ್‌ 26ರಂದು ಬಂಧಿಸಿತ್ತು. ಇವರಿಬ್ಬರ ವಿರುದ್ಧ ಪಿಎಂಎಲ್‌ಎ ಅಡಿ ಪ್ರಕರಣ ದಾಖಲಿಸಲಾಗಿದೆ.

ಈ ಇಬ್ಬರು ಆರೋಪಿಗಳನ್ನು ನ್ಯಾಯಾಧೀಶ ಎಸ್.ಎಂ. ಬೊಸ್ಲೆ ಅವರ ಮುಂದೆ ಮಂಗಳವಾರ ಹಾಜರುಪಡಿಸಲಾಗಿತ್ತು. ಆರೋಪಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇ.ಡಿ ನ್ಯಾಯಾಲಕ್ಕೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು ಜು.20ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು