ಶುಕ್ರವಾರ, ಅಕ್ಟೋಬರ್ 22, 2021
29 °C

ವಿಚಾರಣೆಗೆ ಅನಿಲ್ ದೇಶಮುಖ್ ಗೈರು: ಕ್ರಮ ಜರುಗಿಸಲು ಇ.ಡಿಗೆ ನ್ಯಾಯಾಲಯ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗೈರು ಹಾಜರಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಶುಕ್ರವಾರ ನ್ಯಾಯಾಲಯ ಸೂಚಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್‌ ದೇಶಮುಖ್‌ ಅವರಿಗೆ ಹಲವು ಬಾರಿ ಸಮನ್ಸ್‌ ಜಾರಿ ಮಾಡಲಾಗಿದೆ. ಆದರೂ, ಅವರು ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಹಾಗಾಗಿ ಅವರ ವಿರುದ್ಧ ಐಪಿಸಿ ಕಲಂ 174ರ ಪ್ರಕಾರ ಕ್ರಮಕೈಗೊಳ್ಳಬೇಕೆಂದು ವಿಶೇಷ ನ್ಯಾಯಾಲಯದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಸೆ.18ರಂದು ಅರ್ಜಿ ಸಲ್ಲಿಸಿತ್ತು.

ಎನ್‌ಸಿಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಇ.ಡಿ. ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್.ಎಂ.ನೆರ್ಲಿಕರ್ ಅವರು ಐಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತೀರ್ಪು ನೀಡಿದ್ದಾರೆ.

ಇದನ್ನೂ ಓದಿ: 

ಇ.ಡಿ. ನೀಡಲಾದ ಸಮನ್ಸ್ ಅನ್ನು ಆರೋಪಿ ಮತ್ತು ಆತನ ಮಗಳು ಅಥವಾ ಆತನ ಪರವಾಗಿ ವಕೀಲರು ಸ್ವೀಕರಿಸಿದ್ದಾರೆ ಎಂಬುದನ್ನು ಪರಿಗಣಿಸಿ, ಆರೋಪಿಯ ವಿರುದ್ಧ ಪ್ರಾಥಮಿಕವಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಐಪಿಸಿ ಕಲಂ 174ರ ಪ್ರಕಾರ ಒಂದು ಅವಧಿವರೆಗೆ ಸರಳ ಸೆರೆವಾಸವನ್ನು ಒಂದು ತಿಂಗಳವರೆಗೆ ಅಥವಾ 500 ರೂಪಾಯಿಗಳವರೆಗೆ ದಂಡ ಅಥವಾ ಎರಡಕ್ಕೂ ವಿಧಿಸಬಹುದು.

ಈ ಪ್ರಕರಣದಲ್ಲಿ ದೇಶಮುಖ್ ಅವರ ಇಬ್ಬರು ಸಹಾಯಕರಾದ ಸಂಜೀವ್ ಪಲಾಂಡೆ ಮತ್ತು ಕುಂದನ್ ಶಿಂಧೆ ಅವರನ್ನು ಬಂಧಿಸಲಾಗಿದೆ. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರಿಬ್ಬರ ಜೊತೆಗೆ, ತನಿಖಾ ಸಂಸ್ಥೆಯು ಇತ್ತೀಚೆಗೆ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ ವಜಾಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಆರೋಪಿಯೆಂದು ಹೆಸರಿಸಿದೆ.

ಆದರೆ, ದೇಶಮುಖ್ ಅಥವಾ ಅವರ ಕುಟುಂಬ ಸದಸ್ಯರನ್ನು ಚಾರ್ಜ್ ಶೀಟ್‌ನಲ್ಲಿ ಆರೋಪಿಯನ್ನಾಗಿ ಮಾಡಿಲ್ಲ. ಈ ವರ್ಷದ ಏಪ್ರಿಲ್ 21 ರಂದು ಎನ್‌ಸಿಪಿ ನಾಯಕನ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದ ನಂತರ ಇ.ಡಿ. ದೇಶಮುಖ್ ಮತ್ತು ಆತನ ಸಹಚರರ ವಿರುದ್ಧ ತನಿಖೆ ಆರಂಭಿಸಿತು. ಮಾಜಿ ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಭ್ರಷ್ಟಾಚಾರದ ಆರೋಪ ಹೊರಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು