ಶನಿವಾರ, ಆಗಸ್ಟ್ 13, 2022
23 °C
ಚಂದಾ ಕೊಚ್ಚರ್ ಪತಿ ದೀಪಕ್ ಬಂಧನ

ಹಣ ಅಕ್ರಮ ವರ್ಗಾವಣೆ: ಸೆ. 19ರ ತನಕ ಇಡಿ ವಶಕ್ಕೆ ದೀಪಕ್ ಕೊಚ್ಚರ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಬಂಧಿತರಾಗಿರುವ ಐಸಿಐಸಿಐ ಬ್ಯಾಂಕ್‌ನ ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಇಲ್ಲಿನ ನ್ಯಾಯಾಲಯ ಸೆ. 19ರ ತನಕ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿದೆ.

ಐಸಿಐಸಿಐ ಬ್ಯಾಂಕ್–ವಿಡಿಯೊಕಾನ್ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ದೀಪಕ್ ಅವರನ್ನು ಜಾರಿ ನಿರ್ದೇಶನಾಲಯವು ಸೋಮವಾರ ಬಂಧಿಸಿತ್ತು.

ಕಳೆದ ವರ್ಷ ಜನವರಿಯಲ್ಲಿ ಹಣ ಅಕ್ರಮ ವರ್ಗಾವಣೆ ವಿರೋಧಿ ಕಾನೂನಿನ ಕ್ರಿಮಿನಲ್ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಂಗ್ರಹಿಸಲಾದ ಕೆಲವು ಹೊಸ ಸಾಕ್ಷ್ಯಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ದೀಪಕ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು