ಮಂಗಳವಾರ, ಮಾರ್ಚ್ 28, 2023
33 °C

ಹಣ ಅಕ್ರಮ ವರ್ಗಾವಣೆ: ಜೂನ್ 13ರವರೆಗೆ ಸತ್ಯೇಂದ್ರ ಜೈನ್ ಇ.ಡಿ ವಶಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಇಲ್ಲಿನ ನ್ಯಾಯಾಲಯ ಇನ್ನೂ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ಒಪ್ಪಿಸಿದೆ. 

ಸತ್ಯೇಂದ್ರ ಜೈನ್ ಅವರನ್ನು ಐದು ದಿನಗಳ ಕಾಲ ತನ್ನ ವಶಕ್ಕೆ ಒಪ್ಪಿಸುವಂತೆ ಇ.ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು, ಸತ್ಯೇಂದ್ರ ಅವರನ್ನು ಜೂನ್ 13ರವರೆಗೆ ಇ.ಡಿ ವಶಕ್ಕೆ ನೀಡಿ, ಆದೇಶಿಸಿದ್ದಾರೆ. 

ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ಜೈನ್ ಅವರು ವಶದಲ್ಲಿದ್ದಾಗ ಇ.ಡಿ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದೆ. ಈ ದಾಖಲೆಗಳ ಬಗ್ಗೆ ಜೈನ್ ಅವರನ್ನು ವಿಚಾರಣೆ ನಡೆಸಬೇಕಿದೆ ಎಂದು ಹೇಳಿದರು. ಆದರೆ, ಜೈನ್ ಪರ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಆರೋಪಿಯು ಈಗಾಗಲೇ ಇ.ಡಿ ವಶದಲ್ಲೇ ಇದ್ದಾರೆ. ಹೀಗಾಗಿ ಮತ್ತಷ್ಟು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ಇ.ಡಿ ಕೋರಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು