ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ: ಶಿಕ್ಷೆ ಪ್ರಮಾಣ ಶೇ 96

ಹಾಲಿ, ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾದ ಪ್ರಕರಣಗಳ ಪ್ರಮಾಣ ಶೇ 2.98: ಇ.ಡಿ
Last Updated 16 ಮಾರ್ಚ್ 2023, 12:22 IST
ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಒಟ್ಟು ಪ್ರಕರಣಗಳ ಪೈಕಿ, ಹಾಲಿ ಹಾಗೂ ಮಾಜಿ ಶಾಸಕರು ಮತ್ತು ಸಂಸದರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಖ್ಯೇ ಕೇವಲ ಶೇ 2.98!

ಆದರೆ, ಈ ಕಾಯ್ದೆಯಡಿ ಸಂಸ್ಥೆ ದಾಖಲಿಸಿರುವ ಒಟ್ಟು ಪ್ರಕರಣಗಳಲ್ಲಿ ವಿಧಿಸಲಾದ ಶಿಕ್ಷೆಯ ಪ್ರಮಾಣ ಶೇ 96 ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ), ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ) ಹಾಗೂ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (ಎಫ್‌ಇಒಎ) ಅಡಿ ಕಳೆದ ಜನವರಿ ವರೆಗೆ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿ ಇ.ಡಿ ಪ್ರಕಟಿಸಿರುವ ವರದಿಯಲ್ಲಿ ಈ ವಿವರಗಳನ್ನು ನೀಡಲಾಗಿದೆ.

ಹಣ ಅಕ್ರಮ ವರ್ಗಾವಣೆ ಕಾಯ್ದೆಯು 2005ರ ಜುಲೈ 1ರಂದು ಜಾರಿಗೆ ಬಂದಿದೆ. ಅಂದಿನಿಂದ ಈ ವರೆಗೆ ಇ.ಡಿ ಒಟ್ಟು 5,906 ಇಸಿಐಆರ್‌ಗಳನ್ನು (ಎನ್‌ಫೋರ್ಸ್‌ಮೆಂಟ್ ಕೇಸ್ ಇನ್‌ಫಾರ್ಮೇಷನ್ ರಿಪೋರ್ಟ್ಸ್) ದಾಖಲಿಸಿದೆ. ಇವುಗಳ ಪೈಕಿ, ಹಾಲಿ ಮತ್ತು ಮಾಜಿ ಶಾಸಕರು, ಸಂಸದರು ಹಾಗೂ ವಿಧಾನಪರಿಷತ್‌ ಸದಸ್ಯರ ವಿರುದ್ಧ ದಾಖಲಾದ ಇಸಿಐಆರ್‌ಗಳ ಸಂಖ್ಯೆ 176 (ಶೇ 2.98) ಎಂದು ವರದಿಯಲ್ಲಿ ವಿವರಿಸಲಾಗಿದೆ.

ಇ.ಡಿ ದಾಖಲಿಸಿರುವ ಇಸಿಐಆರ್‌ಗಳು, ಅಪರಾಧ ಪ್ರಕರಣಗಳಲ್ಲಿ ಪೊಲೀಸರು ದಾಖಲಿಸುವ ಎಫ್‌ಐಆರ್‌ಗೆ ಸಮ.

ಪಿಎಂಎಲ್ಎ ಅಡಿ 1,142 ಚಾರ್ಜ್‌ಶೀಟ್‌ಗಳನ್ನು ದಾಖಲಿಸಿದ್ದು, 513 ಜನರನ್ನು ಬಂಧಿಸಲಾಗಿದೆ. 25 ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಂಡಿದೆ. ಈ ಪೈಕಿ 24 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದ್ದರೆ, ಒಂದು ಪ್ರಕರಣದಲ್ಲಿ ಆರೋಪಿಗಳನ್ನು ದೋಷಮುಕ್ತರನ್ನಾಗಿ ಮಾಡಲಾಗಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ.

ಅಂಕಿ–ಅಂಶ

₹ 1,15,350 ಕೋಟಿ

ಇ.ಡಿ ಜಪ್ತಿ ಮಾಡಿರುವ ಸ್ವತ್ತುಗಳ ಮೌಲ್ಯ

33,988

ಎಫ್‌ಇಎಂಎ ಅಡಿ ದಾಖಲಿಸಿರುವ ಪ್ರಕರಣಗಳ ಸಂಖ್ಯೆ

15

ಎಫ್‌ಇಒಎ ಅಡಿ ದಾಖಲಿಸಿರುವ ಪ್ರಕರಣಗಳ ಸಂಖ್ಯೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT