ಶನಿವಾರ, ಜುಲೈ 31, 2021
23 °C

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಮನೆಗಳಲ್ಲಿ ಇ.ಡಿ ಶೋಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನಾಗಪುರ: ಹಣ ಅಕ್ರಮ ವರ್ಗಾವಣೆ ‍ಪ್ರಕರಣದ ಭಾಗವಾಗಿ ಜಾರಿ ನಿರ್ದೇಶನಾಲಯವು(ಇ.ಡಿ) ನಾಗಪುರ ಜಿಲ್ಲೆಯಲ್ಲಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರ ಎರಡು ಮನೆಗಳಲ್ಲಿ  ಭಾನುವಾರ ಶೋಧ ಕಾರ್ಯಾಚರಣೆ ನಡೆಸಿದೆ.

‘ಕತೋಲ್‌ ಪಟ್ಟಣ ಮತ್ತು ವಾಡ್ವಿಹಿರಾ ಗ್ರಾಮದಲ್ಲಿರುವ ದೇಶ್‌ಮುಖ್‌ ಅವರ ಮನೆಗಳ ಮೇಲೆ ಇ.ಡಿಯ ಪ್ರತ್ಯೇಕ ತಂಡವು ದಾಳಿ ನಡೆಸಿದೆ. ಭಾನುವಾರ ಬೆಳಿಗ್ಗೆ 6 ಗಂಟೆಗೆ ಶೋಧ ಕಾರ್ಯಾಚರಣೆ ಆರಂಭವಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

‘ವಾಡ್ವಿಹಿರಾ ಗ್ರಾಮದಲ್ಲಿರುವ ಮನೆಯಲ್ಲಿ ಶೋಧ ಕಾರ್ಯಾಚರಣೆ ಮಧ್ಯಾಹ್ನ 12ಕ್ಕೆ ಮುಕ್ತಾಯವಾಗಿದೆ. ಆದರೆ ಕತೋಲಾದಲ್ಲಿ ಕಾರ್ಯಾಚರಣೆ ಮಧ್ಯಾಹ್ನದ ನಂತರವೂ ಮುಂದುವರಿದಿದೆ’ ಎಂದು ಅವರು ಹೇಳಿದರು.

ಅನಿಲ್‌ ದೇಶಮುಖ್‌ ವಿರುದ್ಧ ದಾಖಲಾಗಿರುವ ಬಹುಕೋಟಿ ಲಂಚ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು