ಮಂಕಿಪಾಕ್ಸ್: ಮುಂಬೈನಲ್ಲಿ ಪ್ರತ್ಯೇಕ ವಾರ್ಡ್

ಮುಂಬೈ: ಕೆಲವು ದೇಶಗಳಲ್ಲಿ ಮಂಕಿಪಾಕ್ಸ್ ಕಾಯಿಲೆ ಪ್ರಕರಣಗಳ ವರದಿ ಆಗುತ್ತಿರುವ ಹಿನ್ನೆಲೆಯಲ್ಲಿ ಬೃಹನ್‌ಮುಂಬೈ ಮಹಾನಗರ ಪಾಲಿಕೆಯು ಮುನ್ನೆಚ್ಚರಿಕಾ ಕ್ರಮವಾಗಿ ಕಸ್ತೂರ ಬಾ ಆಸ್ಪತ್ರೆಯಲ್ಲಿ 28 ಹಾಸಿಗೆಗಳ ವಾರ್ಡ್ಅನ್ನು ಈಗಾಗಲೇ ಕಾಯ್ದಿರಿಸಲಾಗಿದೆ.
ಮಂಕಿಪಾಕ್ಸ್ ಶಂಕಿತ ಸೋಂಕಿತರಿಗೆ ಈ ವಾರ್ಡ್‌ನಲ್ಲಿ ಪ್ರತ್ಯೇಕವಾಗಿ ಇರಿಸಲಾಗುವುದು ಮತ್ತು ಶಂಕಿತರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ(ಎನ್‌ಐವಿ) ಕಳಿಸಲಾಗುವುದು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.
ಇದುವರೆಗೂ ನಗರದಲ್ಲಿ ಮಂಕಿಪಾಕ್ಸ್‌ನ ಶಂಕಿತ ಅಥವಾ ದೃಢ ಪ್ರಕರಣಗಳು ವರದಿ ಆಗಿಲ್ಲ. ವಿದೇಶಗಳಿಂದ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಬಿಎಂಸಿಯ ಸಾರ್ವಜನಿಕ ಆರೋಗ್ಯಾಧಿಕಾರಿ ಒಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.