ಬುಧವಾರ, ಜೂನ್ 29, 2022
26 °C

ಶ್ರೀಲಂಕಾ ಪ್ರವೇಶಿಸಿದ ಮುಂಗಾರು, ಕೇರಳದತ್ತ ಮಾರುತಗಳು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಆರು ದಿನಗಳ ವಿರಾಮದ ಬಳಿಕ ನೈರುತ್ಯ ಮುಂಗಾರು ಗುರುವಾರ ದಕ್ಷಿಣ ಶ್ರೀಲಂಕಾವನ್ನು ಆವರಿಸಿದ್ದು, ಕ್ರಮೇಣ ಕೇರಳದ ಕಡೆಗೆ ಚಲಿಸಲಾರಂಭಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  

‘ದಕ್ಷಿಣ ಅರಬ್ಬಿ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್‌ನ ಬಹುತೇಕ ಭಾಗ, ಲಕ್ಷದ್ವೀಪದ ಪಕ್ಕದ ಪ್ರದೇಶಗಳಲ್ಲಿ ನೈರುತ್ಯ ಮುಂಗಾರು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಕೇರಳ, ಲಕ್ಷದೀಪದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.   

ನೈರುತ್ಯ ಮುಂಗಾರು ಇದೇ 27ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಹೇಳಿತ್ತು. ಕೇರಳದಲ್ಲಿ ಸಾಮಾನ್ಯವಾಗಿ ಜೂನ್‌ 1ಕ್ಕೆ  ಮುಂಗಾರು ಆರಂಭವಾಗುವುದು ವಾಡಿಕೆ.

ಮುಂಗಾರು ವೀಕ್ಷಕರ ಪ್ರಕಾರ, ಈ ತಿಂಗಳ ಆರಂಭದಲ್ಲಿ ಬಂಗಾಳ ಕೊಲ್ಲಿಯಲ್ಲಿ ಅಸನಿ ಚಂಡಮಾರುತದಿಂದಾಗಿ ನೈರುತ್ಯ ಮುಂಗಾರು ವೇಗ ಪಡೆದುಕೊಂಡಿದೆ. ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳನ್ನು ಮುಂಗಾರು ಮಾರುತಗಳು ವಾಡಿಕೆಗಿಂತ ಮುಂಚೆಯೇ ಅಂದರೆ, ಮೇ 16ರಂದು ತಲುಪಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು