ಭಾನುವಾರ, ಜೂನ್ 26, 2022
25 °C

ಕೇರಳಕ್ಕೆ 3 ದಿನ ಮುಂಚಿತವಾಗಿ ಮುಂಗಾರು ಪ್ರವೇಶ: ಹವಾಮಾನ ಇಲಾಖೆ 

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮೂರು ದಿನ ಮುನ್ನವೇ ಕೇರಳಕ್ಕೆ ಪ್ರವೇಶಿಸಿದ್ದು, ಮಾರುತಗಳು ಕೇರಳ ಕರಾವಳಿಗೆ ಅಪ್ಪಳಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ತಿಳಿಸಿದೆ. 

‘ನೈರುತ್ಯ ಮುಂಗಾರು ಮಾರುತಗಳು ಸಾಮಾನ್ಯ ಲೆಕ್ಕಾಚಾರದ ಪ್ರಕಾರ ಜೂನ್ 1ರಂದು ಭಾರತಕ್ಕೆ ಆಗಮಿಸಬೇಕಿತ್ತು. ಆದರೆ, ಈ ಬಾರಿ 3 ದಿನ ಮುನ್ನವೇ ಅಂದರೆ ಮೇ 29ರಂದೇ ಕೇರಳ ಕರಾವಳಿ ಪ್ರವೇಶಿಸಿವೆ’ ಎಂದು ಭಾರತೀಯ ಹವಾಮಾನ ಇಲಾಖೆ ಮುಖ್ಯ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಖಚಿತಪಡಿಸಿದ್ದಾರೆ.

ನೈರುತ್ಯ ಮುಂಗಾರು ಇದೇ 27ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಹೇಳಿತ್ತು. ಕೇರಳದಲ್ಲಿ ಸಾಮಾನ್ಯವಾಗಿ ಜೂನ್‌ 1ಕ್ಕೆ ಮುಂಗಾರು ಆರಂಭವಾಗುವುದು ವಾಡಿಕೆ.

ಮುಂದಿನ ಎರಡು ದಿನಗಳಲ್ಲಿ ಕೇರಳ, ಲಕ್ಷದೀಪದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.   

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು