ಶನಿವಾರ, ಜೂನ್ 25, 2022
28 °C

ಮುಂಬೈ ಪ್ರವೇಶಿಸಿದ ನೈರುತ್ಯ ಮುಂಗಾರು; ನಗರದೆಲ್ಲೆಡೆ ಗುಡುಗು ಸಹಿತ ಮಳೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ನೈರುತ್ಯ ಮುಂಗಾರು ಬುಧವಾರ ಮುಂಬೈಗೆ ಪ್ರವೇಶಿಸಿದ್ದು, ಇದರ ಪರಿಣಾಮವಾಗಿ ಮುಂಬೈ ಮತ್ತು ಉಪನಗರಗಳಲ್ಲಿ ಮುಂಜಾನೆ ಭಾರಿ ಮಳೆಯಾಗಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ’ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.

‘ಮುಂಬೈನ ಹಲವು ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಇದರಿಂದ ಸ್ಥಳೀಯ ರೈಲು ಸೇವೆಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಆದರೆ ಕೆಲವೊಂದು ಬಸ್‌ಗಳ ಮಾರ್ಗವನ್ನು ಬದಲಾಯಿಸಲಾಗಿದೆ’ ಎಂದು ಐಎಂಡಿ ಹೇಳಿದೆ.

‘ಕಳೆದ 24 ಗಂಟೆಗಳಲ್ಲಿ ಕೊಲಾಬಾ ವೀಕ್ಷಣಾಲಯ ಮತ್ತು  ಸಾಂತಾಕ್ರೂಜ್‌ ವೀಕ್ಷಣಾಲಯದಲ್ಲಿ ಕ್ರಮವಾಗಿ 77.4 ಮಿ.ಮೀ ಮತ್ತು 59.6 ಮಿ.ಮೀ ಮಳೆ ದಾಖಲಾಗಿದೆ’ ಎಂದು ಐಎಂಡಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು