ಗುರುವಾರ , ಅಕ್ಟೋಬರ್ 1, 2020
22 °C

ಬಿಹಾರ ಪ್ರವಾಹ: ಸಾವಿನ ಸಂಖ್ಯೆ 21ಕ್ಕೆ ಏರಿಕೆ, ಸಂಕಷ್ಟದಲ್ಲಿ 69 ಲಕ್ಷ ಜನ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Patna floods ndrf

ಪಟ್ನಾ: ಬಿಹಾರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ 69 ಲಕ್ಷಕ್ಕೂ ಹೆಚ್ಚು ಜನ ತೊಂದರೆಗೆ ಸಿಲುಕಿದ್ದು, ಮೃತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ರಕ್ಷಣಾ ಕಾರ್ಯಾಚರಣೆಗಾಗಿ ವಿವಿಧ ಜಿಲ್ಲೆಗಳಲ್ಲಿ ಈವರೆಗೆ ಎನ್‌ಡಿಆರ್‌ಎಫ್‌ನ 33 ತಂಡಗಳನ್ನು ನಿಯೋಜಿಸಲಾಗಿದೆ. 8 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ತರಿಗಾಗಿ 1,402 ಸಮುದಾಯ ಅಡುಗೆ ಕೇಂದ್ರಗಳನ್ನು ಆರಂಭಿಸಲಾಗಿದೆ. 12,239 ಜನರಿಗೆ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: 

ಪ್ರವಾಹದಿಂದಾಗಿ ಸಾವು ಸಂಭವಿಸಿರುವುದಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬದವರಿಗೆ ಪರಿಹಾರ ಒದಗಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿರುವ ನಿತೀಶ್ ಕುಮಾರ್, ದರ್ಭಾಂಗದಲ್ಲಿರುವ ಪರಿಹಾರ ಕೇಂದ್ರ ಮತ್ತು ಸಮುದಾಯ ಅಡುಗೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು