ಬುಧವಾರ, ಸೆಪ್ಟೆಂಬರ್ 22, 2021
29 °C

ಭಾಭೀ ಜೀ ಕೆ ಪಾಪಡ್‌ ತಿಂದು ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆಯೇ?: ರಾವುತ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Sanjay raut

ನವದೆಹಲಿ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ನಿಯಂತ್ರಣದ ಬಗ್ಗೆ ಕೆಲವು ರಾಜ್ಯಸಭಾ ಸದಸ್ಯರು ಟೀಕಿಸಿದ್ದರು. ಇದಕ್ಕೆ ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ಶಿವಸೇನಾ ನಾಯಕ ಸಂಜಯ್ ರಾವುತ್, ನನ್ನ ಅಮ್ಮ ಮತ್ತು ಸಹೋದರನಿಗೆ ಕೋವಿಡ್ ಸೋಂಕು ತಗುಲಿದೆ.

ಮಹಾರಾಷ್ಟ್ರದಲ್ಲಿ ಹಲವಾರು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಧಾರಾವಿಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಬಿಎಂಸಿಯ ಕಾರ್ಯವನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಕೆಲವು ಸದಸ್ಯರು ನಿನ್ನೆ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದು, ಅವರಿಗೆ ಈ ವಿಷಯವನ್ನು ತಿಳಿಸಲು ಬಯಸುತ್ತೇನೆ ಎಂದಿದ್ದಾರೆ.

ಇಷ್ಟೊಂದು ಮಂದಿ ಚೇತರಿಸಿಕೊಂಡಿದ್ದು ಹೇಗೆ ಎಂದು ನಾನು ಸದಸ್ಯರಲ್ಲಿ ಕೇಳಲು ಬಯಸುತ್ತೇನೆ. ಜನರು ಭಾಭೀ ಜೀ ಕೆ ಪಾಪಡ್ ತಿಂದು ಚೇತರಿಸಿಕೊಂಡಿದ್ದಾರೆಯೇ? ಇದು ರಾಜಕೀಯ ಹೋರಾಟ ಅಲ್ಲ, ಜನರನ್ನು ಬದುಕಿಸಲು ಇರುವ ಹೋರಾಟ ಎಂದು ರಾವುತ್ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್‌ಗೆ ಕೋವಿಡ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು