ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌ ಮುಂಗಾರು ಅಧಿವೇಶನ: ಕೇಂದ್ರ ಸರ್ಕಾರದಿಂದ ಸರ್ವ ಪಕ್ಷಗಳ ಸಭೆ

Last Updated 17 ಜುಲೈ 2022, 6:56 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್‌ನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಭಾನುವಾರ ದೆಹಲಿಯಲ್ಲಿ ಚಾಲನೆ ದೊರೆತಿದ್ದು, ರಾಜಕೀಯ ನಾಯಕರು ಪಾಲ್ಗೊಂಡಿದ್ದಾರೆ.

ಸಚಿವ ರಾಜನಾಥ್ ಸಿಂಗ್, ರಾಜ್ಯಸಭೆಯ ಬಿಜೆಪಿಯ ನಾಯಕ ಪಿಯೂಷ್ ಗೋಯಲ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಸಚಿವರು ಸರ್ಕಾರವನ್ನು ಪ್ರತಿನಿಧಿಸಿದರು.

ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತು ಜೈರಾಮ್ ರಮೇಶ್, ಡಿಎಂಕೆಯ ಟಿಆರ್ ಬಾಲು ಮತ್ತು ತಿರುಚಿ ಶಿವ, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ಮತ್ತು ಎನ್‌ಸಿಪಿಯ ಶರದ್ ಪವಾರ್ ಸೇರಿದಂತೆ ಬಹುತೇಕ ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಬಿಜೆಡಿಯ ಪಿನಾಕಿ ಮಿಶ್ರಾ, ವೈಎಸ್‌ಆರ್‌ಸಿಪಿಯ ವಿಜಯಸಾಯಿ ರೆಡ್ಡಿ ಮತ್ತು ಮಿಥುನ್ ರೆಡ್ಡಿ, ಟಿಆರ್‌ಎಸ್‌ನ ಕೇಶವ ರಾವ್ ಮತ್ತು ನಾಮ ನಾಗೇಶ್ವರ್ ರಾವ್, ಆರ್‌ಜೆಡಿಯ ಎಡಿ ಸಿಂಗ್ ಮತ್ತು ಶಿವಸೇನೆಯ ಸಂಜಯ್ ರಾವುತ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ಅಧಿವೇಶನ ಆರಂಭಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಒಮ್ಮತ ಮೂಡಿಸುವುದು ವಾಡಿಕೆ.

ಸಭೆಯಲ್ಲಿ ಅಗ್ನಿಪಥ ಯೋಜನೆ, ಆರ್ಥಿಕತೆ ಮತ್ತು ನಿರುದ್ಯೋಗಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುವ ನಿರೀಕ್ಷೆಯಿದೆ.

ಸರ್ಕಾರವು ತನ್ನ ಶಾಸಕಾಂಗ ಕಾರ್ಯಸೂಚಿಯನ್ನು ಮುಂದಿಡುವ ಸಾಧ್ಯತೆಗಳಿವೆ.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಂದು ಆರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT