ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಶೀಲ್ಡ್‌ ಉತ್ಪಾದನೆ ತಿಂಗಳಿಗೆ 12 ಕೋಟಿಗೆ ಹೆಚ್ಚಳ: ಸಚಿವ ಮಾಂಡವೀಯ

ಕೋವ್ಯಾಕ್ಸಿನ್‌ ಉತ್ಪಾದನೆ 5.8 ಕೋಟಿಗೆ ಹೆಚ್ಚಳಕ್ಕೆ ಕ್ರಮ
Last Updated 3 ಆಗಸ್ಟ್ 2021, 12:04 IST
ಅಕ್ಷರ ಗಾತ್ರ

ನವದೆಹಲಿ: ವರ್ಷಾಂತ್ಯದ ವೇಳೆಗೆ ಕೋವಿಶೀಲ್ಡ್‌ ಲಸಿಕೆಯ ಉತ್ಪಾದನೆಯನ್ನು ತಿಂಗಳಿಗೆ 12 ಕೋಟಿ ಹಾಗೂ ಕೋವ್ಯಾಕ್ಸಿನ್‌ನ ಉತ್ಪಾದನೆಯನ್ನು 5.8 ಕೋಟಿ ಡೋಸ್‌ಗಳಿಗೆ ಹೆಚ್ಚಿಸಲು ಯೋಜಿಸಲಾಗಿದೆ ಇದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಮಂಗಳವಾರ ಮಾಹಿತಿ ನೀಡಿದೆ.

ಕೋವಿಡ್‌–19 ಲಸಿಕೆಗಳನ್ನು ಉತ್ಪಾದಿಸುವ ಕಂಪನಿಗಳು ಒದಗಿಸಿರುವ ಮಾಹಿತಿಯನ್ನು ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವ ಮನಸುಖ್‌ ಮಾಂಡವೀಯ ಈ ವಿಷಯ ತಿಳಿಸಿದರು.

ಲಸಿಕೆಗಳನ್ನು ತಯಾರಿಸುವ ಕಂಪನಿಗಳ ಸದ್ಯದ ಉತ್ಪಾದನಾ ಸಾಮರ್ಥ್ಯ ಹಾಗೂ ಡಿಸೆಂಬರ್‌ ವೇಳೆಗೆ ಉತ್ಪಾದನಾ ಸಾಮರ್ಥ್ಯದಲ್ಲಿ ಎಷ್ಟು ಹೆಚ್ಚಳ ಮಾಡಲಾಗುವುದು ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.

ಕೋವಿಡ್‌–19 ಲಸಿಕೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಅಧೀನದ ಬಯೋಟೆಕ್ನಾಲಜಿ ಇಲಾಖೆಯು ‘ಮಿಷನ್‌ ಕೋವಿಡ್‌ ಸುರಕ್ಷಾ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಸಾರ್ವಜನಿಕ ವಲಯದ ಉದ್ಯಮವಾದ ಬಯೋಟೆಕ್ನಾಲಜಿ ಇಂಡಸ್ಟ್ರಿ ರಿಸರ್ಚ್ ಅಸಿಸ್ಟನ್ಸ್‌ ಕೌನ್ಸಿಲ್‌ (ಬಿಐಆರ್‌ಎಸಿ) ಈ ಕಾರ್ಯಕ್ರಮವನ್ನು ಜಾರಿಗೊಳಿಸುವುದು ಎಂದು ಅವರು ಮಾಹಿತಿ ನೀಡಿದರು.

4 ಕಂಪನಿಗಳಿಂದ ಲಸಿಕೆ ಉತ್ಪಾದನೆ: ‘ದೇಶದ ಇನ್ನೂ ನಾಲ್ಕು ಔಷಧ ಕಂಪನಿಗಳು ಅಕ್ಟೋಬರ್‌–ನವೆಂಬರ್‌ ವೇಳೆಗೆ ಕೋವಿಡ್‌ ಲಸಿಕೆಗಳ ಉತ್ಪಾದನೆಯನ್ನು ಆರಂಭಿಸುವ ನಿರೀಕ್ಷೆ ಇದೆ’ ಎಂದು ಸಚಿವ ಮಾಂಡವೀಯ ತಿಳಿಸಿದರು.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆ ಈ ವಿಷಯ ತಿಳಿಸಿದ ಅವರು, ‘ಲಸಿಕೆ ಉತ್ಪಾದನೆ ಹೆಚ್ಚಾಗುವುದರಿಂದ ಲಸಿಕೆ ಕಾರ್ಯಕ್ರಮಕ್ಕೆ ಮತ್ತಷ್ಟು ವೇಗ ಸಿಗುವುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ನವೆಂಬರ್‌ ವೇಳೆಗೆ ಬಯೋಲಾಜಿಕಲ್ಸ್ ಇ ಹಾಗೂ ನೋವಾರ್ಟಿಸ್‌ ಕಂಪನಿಗಳ ಲಸಿಕೆಗಳು ಸಹ ಮಾರುಕಟ್ಟೆಗೆ ಬರಲಿವೆ. ತುರ್ತು ಸಂದರ್ಭದಲ್ಲಿ ಬಳಕೆಗಾಗಿ ಝೈಡಸ್‌–ಕ್ಯಾಡಿಲಾ ಕಂಪನಿಯ ಔಷಧಕ್ಕೆ ತಜ್ಞರ ಸಮಿತಿ ಅನುಮೋದನೆ ಸಿಗುವ ಸಾಧ್ಯತೆ’ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT