ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬಿ ಗಾಯಕ ಮೂಸೆವಾಲಾ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

Last Updated 30 ಮೇ 2022, 15:20 IST
ಅಕ್ಷರ ಗಾತ್ರ

ಡೆಹ್ರಾಡೂನ್: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಸೋಮವಾರ ಐವರನ್ನು ಡೆಹ್ರಾಡೂನ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಮ್ಲಾ ಬೈಪಾಸ್‌ನಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆಗಾಗಿ ಪಂಜಾಬ್‌ಗೆ ಕರೆದೊಯ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.‌

‘ಬಂಧಿತ ಐವರು ಆರೋಪಿಗಳು ಉತ್ತರಾಖಂಡದ ಚಮೋಲಿ ಜಿಲ್ಲೆಯ ಹಿಮಾಲಯದ ಸಿಖ್ಖರ ದೇಗುಲ ಹೇಮಕುಂಡ್ ಸಾಹಿಬ್‌ನಿಂದ ಹಿಂತಿರುಗುತ್ತಿದ್ದರು. ಗಾಯಕನ ಹತ್ಯೆ ಪ್ರಕರಣದಲ್ಲಿ ನಂಟಿರುವ ಶಂಕೆಯ ಮೇಲೆ ಐವರನ್ನು ಬಂಧಿಸಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT