ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಸೆವಾಲಾ ಹತ್ಯೆಯ ತನಿಖೆಯನ್ನು ಕೇಂದ್ರೀಯ ಸಂಸ್ಥೆಗಳಿಂದ ನಡೆಸಲು ಅಮಿತ್ ಶಾಗೆ ಮನವಿ

Last Updated 4 ಜೂನ್ 2022, 13:39 IST
ಅಕ್ಷರ ಗಾತ್ರ

ಚಂಡೀಗಡ: ಗಾಯಕ ಸಿಧು ಮೂಸೆವಾಲಾ ಅವರ ತಂದೆಬಲ್ ಕೌರ್‌ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ತಮ್ಮ ಪುತ್ರನ ಹತ್ಯೆ ಕುರಿತು ಕೇಂದ್ರೀಯ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಮೇ 29ರಂದು ಅಪರಿಚಿತ ದುಷ್ಕರ್ಮಿಗಳು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ್ದರು. ಚಂಡೀಗಡಕ್ಕೆ ಶನಿವಾರ ಭೇಟಿ ನೀಡಿದ ಅಮಿತ್ ಶಾ, ಬಿಜೆಪಿ ನಾಯಕರ ಜತೆ ಸಭೆ ನಡೆಸಿ, ಹರಿಯಾಣದ ಪಂಚಕುಲಕ್ಕೆ ತೆರಳಿದರು.

‘ಈಗಾಗಲೇ ಸಿಧು ಕುಟುಂಬದವರು ಅಮಿತ್‌ ಶಾ ಅವರಿಗೆ ಪತ್ರ ಬರೆದು ಕೇಂದ್ರೀಯ ಸಂಸ್ಥೆಗಳಿಂದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ’ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ತಿಳಿಸಿದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸಿಧು ನಿವಾಸಕ್ಕೆ ಭೇಟಿ ನೀಡಿ, ಶೀಘ್ರ ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದರು. ಮೂಸೆವಾಲಾ ಅವರ ದೇಹದಲ್ಲಿ 19 ಗುಂಡುಗಳ ಗಾಯದ ಗುರುತುಗಳಿರುವುದುಮರಣೋತ್ತರ ಪರೀಕ್ಷೆಯಲ್ಲಿ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT