ನವದೆಹಲಿ (ಪಿಟಿಐ): 2023–24ರ ಶೈಕ್ಷಣಿಕ ವರ್ಷದಿಂದ ಹೊಸ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜುಗಳನ್ನು ತೆರೆಯಲು ಇದ್ದ ನಿರ್ಬಂಧವನ್ನು ತೆಗೆದು ಹಾಕಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಗುರುವಾರ ತಿಳಿಸಿದೆ.
ಕೋರ್ಸ್‌ನಲ್ಲಿ ದಾಖಲಾತಿಗಳು ಕಡಿಮೆಯಾಗುತ್ತಿರುವ ಕಾರಣ ತಾಂತ್ರಿಕ ಶಿಕ್ಷಣ ನಿಯಂತ್ರಕರು 2020-21ರ ಶೈಕ್ಷಣಿಕ ವರ್ಷದಿಂದ ಹೊಸ ಎಂಜಿನಿಯರಿಂಗ್ ಸಂಸ್ಥೆಗಳನ್ನು ತೆರೆಯಲು ಎರಡು ವರ್ಷಗಳ ನಿಷೇಧ ವಿಧಿಸಿತ್ತು.
‘ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನದಲ್ಲಿ ಹೊಸ ಸಂಸ್ಥೆಗಳನ್ನು ಸ್ಥಾಪಿಸುವ ನಿಷೇಧವನ್ನು ತೆಗೆದು ಹಾಕಲಾಗಿದೆ. ಆದಾಗ್ಯೂ, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನದಲ್ಲಿ ಹೊಸ ಸಂಸ್ಥೆ ಸ್ಥಾಪಿಸಲು, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಬಹು-ಶಿಸ್ತಿನ ವಿಷಯಗಳಲ್ಲಿ ಕೋರ್ಸ್‌ಗಳನ್ನು ನೀಡುವ ಅರ್ಜಿದಾರರಿಗೆ ಆದ್ಯತೆ ನೀಡಲಾಗುವುದು’ ಎಂದು ಎಐಸಿಟಿಇ ಮಾರ್ಗಸೂಚಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.