ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊರ್ಬಿ ದುರಂತ: ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

Last Updated 25 ನವೆಂಬರ್ 2022, 2:45 IST
ಅಕ್ಷರ ಗಾತ್ರ

ಅಹಮದಾಬಾದ್‌: ಸಾರ್ವಜನಿಕ ಬಳಕೆ ನಿರ್ಬಂಧಿತ ಮೊರ್ಬಿ ತೂಗು ಸೇತುವೆ ನಿರ್ವಹಣೆಯನ್ನು ಟೆಂಡರ್‌ ಪ್ರಕ್ರಿಯೆ ಅನುಸರಿಸದೇ, ಯಾವುದೇ ಒಡಂಬಡಿಕೆಯನ್ನೂ ಮಾಡಿಕೊಳ್ಳದೆ ಒರೆವಾ ಸಮೂಹದ ಖಾಸಗಿ ಸಂಸ್ಥೆಗೆ ಐದು ವರ್ಷ ಗುತ್ತಿಗೆ ನೀಡಿರುವುದಕ್ಕೆ ಗುಜರಾತ್‌ ಹೈಕೋರ್ಟ್‌ ಗುರುವಾರ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮೊರ್ಬಿ ಪುರಸಭೆ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳದಿರುವುದಕ್ಕೂ ಸರ್ಕಾರಕ್ಕೆ ಬಿಸಿ ಮುಟ್ಟಿಸಿರುವ ಕೋರ್ಟ್‌, ಡಿಸೆಂಬರ್‌ 12ರಂದು ನಡೆಯಲಿರುವ ಮುಂದಿನ ವಿಚಾರಣೆಯೊಳಗೆ ವಿವರಣೆ ನೀಡುವಂತೆ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ನೇತೃತ್ವದ ವಿಭಾಗೀಯ ಪೀಠವು, ಮೃತರ ಜಾತಿವಾರು ಪಟ್ಟಿ ಸಿದ್ಧಪಡಿಸಿರುವುದನ್ನು ಕಟುವಾಗಿ ಪ್ರಶ್ನಿಸಿತು.

ಸೇತುವೆ ಕುಸಿಯಲು ಕಾರಣವೇನೆಂದು ತನಿಖೆ ನಡೆಸಿದ ವಿಶೇಷ ತನಿಖಾ ತಂಡದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆಪೀಠವು ಸೂಚಿಸಿತು.

ಅ.30ರಂದು ಮೊರ್ಬಿ ತೂಗು ಸೇತುವೆ ಕುಸಿದ ದುರಂತದಲ್ಲಿ 135 ಜನರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT