ಸೋಮವಾರ, ಜೂನ್ 14, 2021
26 °C

ಗೋವಾ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೆ 13 ಕೋವಿಡ್ ಪೀಡಿತರ ಸಾವು

ಪಿಟಿಐ‌ Updated:

ಅಕ್ಷರ ಗಾತ್ರ : | |

ಪಣಜಿ: ಇಲ್ಲಿನ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 13 ಮಂದಿ ಕೋವಿಡ್‌ ಪೀಡಿತರು ಶುಕ್ರವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಕಳೆದ ನಾಲ್ಕು ದಿನದಲ್ಲಿ ಮೃತರಾದವರ ಸಂಖ್ಯೆ 75ಕ್ಕೆ ಏರಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಸಾವುಗಳ ಕುರಿತ ಅರ್ಜಿಗಳ ವಿಚಾರಣೆಯು ಬಾಂಬೆ ಹೈಕೋರ್ಟ್‌ನ ಗೋವಾ ಪೀಠದ ಎದುರು ನಡೆದಿರುವಂತೆಯೇ ಇತ್ತ  ಸಾವಿನ ಸರಣಿ ಮುಂದುವರಿದಿದೆ.

ಆಸ್ಪತ್ರೆಯಲ್ಲಿ ಸಂಭವಿಸಿದ ಇತ್ತೀಚಿನ ಸಾವುಗಳಿಗೆ ಸರ್ಕಾರ ನಿಖರ ಕಾರಣವನ್ನು ತಿಳಿಸಿಲ್ಲ. ಆದರೆ, ಹೈಕೋರ್ಟ್‌ಗೆ ನೀಡಿರುವ ಮಾಹಿತಿಯಲ್ಲಿ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ವ್ಯವಸ್ಥೆಯಲ್ಲಿ ಸಮಸ್ಯೆಗಳಿವೆ ಎಂದು ಹೇಳಿದೆ.

ಅಡ್ವೋಕೇಟ್‌ ಜನರಲ್‌ ದೇವಿದಾಸ್‌ ಪಂಗಂ ಅವರು ನ್ಯಾಯಮೂರ್ತಿಗಳಾದ ನಿತಿನ್‌ ಸಾಂಬ್ರೆ ಮತ್ತು ಮಹೇಶ್‌ ಸೋನಕ್‌ ಅವರಿದ್ದ ಪೀಠಕ್ಕೆ, ಆಮ್ಲಜನಕ ಟ್ರಾಲಿಗಳನ್ನು ಸಾಗಿಸುವ ಕ್ರಿಯೆಯಲ್ಲಿ ಟ್ರ್ಯಾಕ್ಟರ್‌ಗಳ ಬಳಕೆ ಆಗುತ್ತಿದ್ದು, ಇದರ ಜೊತೆಗೆ ಹೆಚ್ಚಿನ ಸಂಖ್ಯೆಯ ಸಿಲಿಂಡರ್‌ಗಳಿಗೆ ಸಂಪರ್ಕ ಕಲ್ಪಿಸುವಲ್ಲಿ ಸಮಸ್ಯೆಯಿದೆ ಎಂದು ತಿಳಿಸಿದರು.

ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ದಾಖಲಿಸಲಾಗಿದ್ದ 13 ಕೋವಿಡ್‌ ರೋಗಿಗಳು ಶುಕ್ರವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಕಳೆದ ನಾಲ್ಕು ದಿನಗಳಲ್ಲಿ ಬೆಳಗಿನ ಜಾವ 2 ರಿಂದ 6 ಗಂಟೆಯ ಅವಧಿಯಲ್ಲಿ ಮೃತರಾದವರ ಸಂಖ್ಯೆ 75ಕ್ಕೆ ಏರಿದಂತಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು