ಶುಕ್ರವಾರ, ಸೆಪ್ಟೆಂಬರ್ 17, 2021
23 °C

ಹೈದರಾಬಾದ್‌ನಲ್ಲಿ ಮತ್ತೆ ಮಳೆ: ಜನ ಹೈರಾಣ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಹೈದರಾಬಾದ್‌ ನಗರ ತತ್ತರಿಸಿದ್ದು ಬಹುತೇಕ ಭಾಗಗಳಲ್ಲಿ  ಜನರು ಆತಂಕದಿಂದಲೇ ರಾತ್ರಿ ಕಳೆದಿದ್ದಾರೆ.

ಕಳೆದೊಂದು ವಾರದಲ್ಲಿ ಮಹಾ ಮಳೆಗೆ ಹೈದರಾಬಾದ್‌ ನಲುಗಿ ಹೋಗಿದೆ. ಶುಕ್ರವಾರ ಮತ್ತು ಶನಿವಾರ ಹಗಲು ಮಳೆಯಾಗಿರಲಿಲ್ಲ. ಆದರೆ ರಾತ್ರಿ ಮತ್ತೆ 170 ಮಿ.ಮೀಟರ್‌ನಷ್ಟು ಮಳೆ ಸುರಿದಿದೆ. ಸಾಕಷ್ಟು ಅವಘಡಗಳು ಸಂಭವಿಸಿದ್ದು ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ. 

ಮಳೆಯ ಪರಿಣಾಮ ಟ್ರಾಫಿಕ್‌ ಜಾಮ್‌ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದ ಪರಿಣಾಮ ಅಲ್ಲಿ ವಾಸವಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೈದರಾಬಾದ್‌ ಮಹಾನಗರ ಪಾಲಿಕೆ ಸಿಬ್ಬಂದಿಗಳು ತಿಳಿಸಿದ್ದಾರೆ.

ಹೈದರಾಬಾದ್‌ನಲ್ಲಿ ಮಳೆಯ ಪರಿಣಾಮ ಈ ವಾರದಲ್ಲಿ 50 ಜನರು ಮೃತಪಟ್ಟಿದ್ದಾರೆ ಎಂದು ತೆಲಂಗಾಣ ಸರ್ಕಾರ ಗುರುವಾರ ತಿಳಿಸಿತ್ತು. ಎನ್‌ಡಿಆರ್‌ಎಫ್‌ ಹಾಗೂ ಪಾಲಿಕೆ ಸಿಬ್ಬಂದಿಗಳನ್ನು ರಕ್ಷಣ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು ಜನರು ಮನೆಯಿಂದ ಹೊರ ಬರದಂತೆ ಸೂಚಿಸಿಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು