ಹೆಚ್ಚು ಬೇಡಿಕೆ ಇರುವ ಪ್ರದೇಶಗಳಲ್ಲಿ ಮತ್ತಷ್ಟು ವಿಶೇಷ ರೈಲುಗಳ ಸೇವೆಗೆ ಚಿಂತನೆ

ನವದೆಹಲಿ: ಹೆಚ್ಚು ಬೇಡಿಕೆ ಇರುವ ಪ್ರದೇಶಗಳಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಮತ್ತಷ್ಟು ವಿಶೇಷ ರೈಲುಗಳನ್ನು ಒದಗಿಸಲು ರೈಲ್ವೆ ಸಚಿವಾಲಯ ಚಿಂತನೆ ನಡೆಸಿದೆ.
ಈ ಸಂಬಂಧ ಹೆಚ್ಚುವರಿ ವಿಶೇಷ ರೈಲುಗಳ ಸಂಚಾರ ಆರಂಭಿಸುವ ಕುರಿತು ರಾಜ್ಯ ಸರ್ಕಾರಗಳ ಒಪ್ಪಿಗೆ ಕೋರಲಾಗಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ.
ಪ್ರಸ್ತುತ 230 ವಿಶೇಷ ರೈಲುಗಳು ಇದ್ದು ಇದರ ಜೊತೆಗೆ ಹೊಸದಾಗಿ ಆರಂಭಿಸಲಾಗುವ ವಿಶೇಷ ರೈಲುಗಳ ಸಂಖ್ಯೆಯ ಕುರಿತು ಶೀಘ್ರದಲ್ಲಿ ಮಾಹಿತಿ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ. ಕೊರೊನಾ ವೈರಸ್ ಬಿಕ್ಕಟ್ಟಿನ ಕಾರಣಕ್ಕಾಗಿ ಸದ್ಯಕ್ಕೆ ಎಲ್ಲಾ ಪ್ರಯಾಣಿಕ ರೈಲುಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.