ಭಾನುವಾರ, ಜೂನ್ 26, 2022
28 °C

ದೆಹಲಿ: ಕೊರೊನಾ ಸೋಂಕಿಗೆ ಒಂದೇ ದಿನ 306 ಜನ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಗುರುವಾರ ಸಂಜೆ‌ ಕೊನೆಗೊಂಡ 24 ಗಂಟೆಗಳ‌ ಅವಧಿಯಲ್ಲಿ 306 ಜನ ಸಾವಿಗೀಡಾಗಿದ್ದಾರೆ.

ಇದೇ ವೇಳೆ ಒಟ್ಟು 26,169 ಜನ ಮಾರಣಾಂತಿಕ ಸೋಂಕಿಗೆ ಒಳಗಾಗಿದ್ದಾರೆ. ಪರೀಕ್ಷೆಗೆ ಒಳಪಟ್ಟಿರುವ ಒಟ್ಟು 72,208 ಜನರ ಪೈಕಿ ಶೇ 36.24ರಷ್ಟು ಜನರಲ್ಲಿ ಸೊಂಕು ಪತ್ತೆಯಾಗಿದೆ. ಇದುವರೆಗೆ ಸೋಂಕು ಕಾಣಿಸಿಕೊಂಡ ಶೇಕಡಾವಾರು ಪ್ರಮಾಣದಲ್ಲಿ ಇದು ಅತಿ ಹೆಚ್ಚು ಎಂದು ಆರೋಗ್ಯ ಇಲಾಖೆ‌ ಹೇಳಿದೆ.

ದೆಹಲಿಯಲ್ಲಿ ಕಳೆದ ಮಂಗಳವಾರದಿಂದ ಒಂದು ವಾರದ ಅವಧಿಯ ಲಾಕ್‌ಡೌನ್ ಜಾರಿಯಲ್ಲಿದ್ದು, ಜನ ಮನೆ‌ ಬಿಟ್ಟು ಹೊರಗೆ ಬರದಂತೆ ತಡೆಯಲು ಪೊಲೀಸ್ ಹಾಗೂ ಕೇಂದ್ರೀಯ ಪಡೆಗಳ‌ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಆದರೂ ಕೊರೊನಾ ಸೋಂಕು ಹರಡುತ್ತಿರುವುದು ನಿಯಂತ್ರಣಕ್ಕೆ ಬರುತ್ತಿಲ್ಲ.

ಈ ನಡುವೆ 19,609 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ತೆರಳಿದ್ದು, ಇನ್ನೂ 91,618 ಸಕ್ರಿಯ ಪ್ರಕರಣಗಳಿವೆ.

3 ಲಕ್ಷ ದಾಟಿದ ಸೋಂಕಿತರ ಸಂಖ್ಯೆ:

ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು  3,32,051 ಜನ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ಈ ಪೈಕಿ ಚಿಕಿತ್ಸೆಗೆ ಸ್ಪಂದಿಸದೆ 2,365 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ಖಚಿತಪಡಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು